ಮೈಸೂರು:ರಾಜ್ಯ ಮಟ್ಟದಲ್ಲಿ ಮೈಸೂರು ನಗರ ಪಾಲಿಕೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದ ಪಾಲಿಕೆ ಸದಸ್ಯರುಗಳು ಮಾನ ಹರಾಜು ಹಾಕುತ್ತಿದ್ದಾರೆ ಎಂದು ಕರ್ನಾಟಕ ಪ್ರಜಾ ಪಾರ್ಟಿಯ ಯುವ ನಾಯಕ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಮೈಸೂರು ಮಹಾ ನಗರ ಪಾಲಿಕೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷದ ಸದಸ್ಯರು ಮಹಾಪೌರರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಇದಕ್ಕೆ ನಮ್ಮ ವಿರೋಧವಿಲ್ಲ, ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು
ಆದರೆ ಮೈಸೂರು ಮಹಾ ಪೌರರ ಕುರ್ಚಿಗೆ |ಕತ್ತೆ ಭಾವಚಿತ್ರ ಆಂಟಿಸಿ| ‘ಕಾಂಗ್ರೆಸ್, ಮತ್ತು ‘ಜೆಡಿಎಸ್, ಸದಸ್ಯರು ಪ್ರತಿಭಟನೆ ಮಾಡುವ ಮೂಲಕ ಪಾಲಿಕೆಯ ಮಾನವನನ್ನು ರಾಜ್ಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ ಎಂದು ಅವರು ಕಿಡಿಕಾರಿದರು.
ಮೈಸೂರಿನ ಅಭಿವೃದ್ಧಿ ವಿಷಯದಲ್ಲಿ ಮೂರು ಪಕ್ಷಗಳ ಪಾಲಿಕೆಯ ಸದಸ್ಯರುಗಳು ಆಡಳಿತ ನಡೆಸುವಲ್ಲಿ ಗೊಂದಲಕ್ಕೆ ಒಳಗಾಗಿದ್ದರೆ.
ಮೈಸೂರಿನ ಜನತೆ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದಾರೆ,
ಮುಂದಿನ ಸ್ಥಳಿಯ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಪಕ್ಷಗಳನ್ನು ತಿರಸ್ಕರಿಸಲಿದ್ದಾರೆ ಎಂದಿದ್ದಾರೆ.
ಇನ್ನೇನು ಕೆಲವೇ ತಿಂಗಳಲ್ಲಿ ಪಾಲಿಕೆ ಚುನಾವಣೆ ಬರಲಿದ್ದು ಕರ್ನಾಟಕ ಪ್ರಜಾ ಪಾರ್ಟಿಯ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡುವ ಮೂಲಕ
ಮೈಸೂರಿನ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಮನವಿ ಮಾಡಿದ್ದಾರೆ.