ಕೊಪ್ಪಳ/ಕಾರಟಗಿ:ಸಂಪುಟ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿದ ಕಾರಣ 2 (ಬಿ) ಅಡಿಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಬೃಹತ್ ಪ್ರತಿಭಟಿನೆ ಮೂಲಕ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕನಕಗಿರಿ ಹಾಗೂ ಕಾರಟಗಿ ಮುಸ್ಲಿಂ ಸಮುದಾಯದವರು ಮಂಗಳವಾರ ಪುರಸಭೆಯಿಂದ ಕಾಲ್ನಡಿಗೆ ಮೂಲಕ ಪ್ರತಿಭಟಿಸಿ ಮಾನ್ಯ ತಹಶೀಲ್ದಾರರ ಬಸವರಾಜ್ ಎಂ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಮುದಾಯದ ಯುವ ಮುಖಂಡ ಜಾಕಿಬ್ ವಿದ್ಯಾರ್ಥಿ ಮಾತನಾಡಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮಾರ್ಚ್ 24/ ರಂದು
ಸಂಪುಟ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿದ ಕಾರಣ. ಇದು ಅಸಂವಿಧಾನಿಕ ಹಾಗೂ ಉದ್ದೇಶಿತ ದಾಳಿಯಾಗಿದೆ, ಸಂವಿಧಾನದದಲ್ಲಿ ಧರ್ಮಧಾರಿತ ಮೀಸಲಾತಿ ಇಲ್ಲದಿರುವುದರಿಂದ 2(ಬಿ) ಪ್ರವರ್ಗದಡಿಯಲ್ಲಿ ಇತರೆ ಹಿಂದುಳಿದ ವರ್ಗಗಳಂತೆ ಕರ್ನಾಟಕದ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ ಗುರುತಿಸಿ 2(ಬಿ) ಮೀಸಲಾತಿ
ನೀಡಲಾಗಿತ್ತು. ಸ್ವಾತಂತ್ರ್ಯ ನಂತರ ನಾಗನಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು 1990 ರ ಚಿನ್ನಪ್ಪ ರೆಡ್ಡಿ ಆಯೋಗ ಕೂಡ
ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿರುವುದನ್ನು ನಾವು ಕಾಣಬಹುದು. ವಾಸ್ತವಾಂಶ ಹೀಗಿದ್ದರೂ ಸಹ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿ ಕೊಳ್ಳುವ ಷಡ್ಯಂತ್ರದ ಮುಂದುವರಿದ
ಭಾಗವಾಗಿ 2(ಬಿ) ಮೀಸಲಾತಿ ರದ್ದುಪಡಿಸಿರುವುದು ದೃಢವಾಗುತ್ತದೆ, ಸಂವಿಧಾನದ ಆಶಯಗಳಂತೆ ಸರ್ಕಾರ ತನ್ನ ಆಡಳಿತ ನಡೆಸಬೇಕೆ
ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಅಲ್ಲ, ಈ ನಿಟ್ಟಿನಲ್ಲಿ ಮುಸ್ಲಿಮ್ ಸಮುದಾಯಕ್ಕೆ ನಿಗಧಿಯಾಗಿದ್ದ 2(ಬಿ)
ಮೀಸಲಾತಿಯನ್ನು ಮರು ಸ್ಥಾಪಿಸಬೇಕೆಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ, ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಮುಸ್ಲಿಮರ ಹಿತದೃಷ್ಟಿಯಿಂದ ಸರ್ಕಾರ ಕರ್ತವ್ಯ ನಿರ್ವಹಿಸಬೇಕೆಂದು ಗೌರವನ್ವಿತ ರಾಜ್ಯಪಾಲರಿಗೇ ತಾವುಗಳು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮುಸ್ಲಿಂ ಸಮುದಾಯದವರು ಹಿರಿಯರು ಮುಖಂಡರು.ವಿದ್ಯಾರ್ಥಿಗಳು.ಸುತ್ತ ಮುತ್ತಲಿನ ನೂರಾರು ಮುಸ್ಲಿಂ ಭಾಂದವರು ಭಾಗಿಯಾಗಿದ್ದರು.