ಭದ್ರಾವತಿ: ಕೇಂದ್ರ ಚುನಾವಣಾ ಆಯೋಗ 2023ರ ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸುತ್ತಿದ್ದಂತೆ ಕ್ಷೇತ್ರದಾದ್ಯಂತ ನೀತಿ ಸಂಹಿತೆ ಜಾರಿಗೆ ಬಂದಿದ್ದು, ನಗರಸಭೆ ಸಿಬ್ಬಂದಿಗಳು ನಗರದ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಭಾವಚಿತ್ರಗಳು, ನಾಮಫಲಕಗಳು ಪ್ರದರ್ಶನಗೊಳ್ಳದಂತೆ ಕ್ರಮ ಕೈಗೊಳ್ಳುತ್ತಿರುವುದು ಕಂಡು ಬಂದಿತು.
ಸಾರ್ವಜನಿಕ ಕಟ್ಟಡಗಳು, ಸಮುದಾಯ ಭವನಗಳು, ಆಟೋ, ಟ್ಯಾಕ್ಸಿ ನಿಲ್ದಾಣಗಳು ಸೇರಿದಂತೆ ಹಲವೆಡೆ ಜನಪ್ರತಿನಿಧಿಗಳ ಭಾವಚಿತ್ರ ಹಾಗು ನಾಮಫಲಕಗಳು ಪ್ರದರ್ಶನಗೊಳ್ಳದಂತೆ ಮುಚ್ಚುವ ಕಾರ್ಯದಲ್ಲಿ ತೊಡಗಿದ್ದು, ಈ ಬಾರಿ ನೀತಿ ಸಂಹಿತೆ ಮತ್ತುಷ್ಟು ಬಿಗಿಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ. ಈಗಾಗಲೇ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಅಭ್ಯರ್ಥಿಗಳು ಕ್ಷೇತ್ರದಾದ್ಯಂತ 3-4 ಸುತ್ತಿನ ಪ್ರಚಾರ ಕಾರ್ಯ ಮುಕ್ತಾಯಗೊಳಿಸಿದ್ದು, ಮತದಾರರನ್ನು ಸೆಳೆಯಲು ನಾನಾ ರೀತಿಯ ಕಸರತ್ತು ಸಹ ನಡೆಸಿದ್ದಾರೆ. ಮುಂದಿನ ಪ್ರಚಾರದ ಕಾರ್ಯತಂತ್ರ ಯಾವ ರೀತಿ ಕೈಗೊಳ್ಳುತ್ತಾರೆಂಬುದನ್ನು ಕಾದು ನೋಡಬೇಕಾಗಿದೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.