ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ ಪತ್ರ,ಬ್ಯಾನರ್, ಪೋಸ್ಟರ್ ಮುದ್ರಿಸಲು ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸ್ನೇಹಲ್.ಆರ್

ಯಾದಗಿರಿ:ಏಪ್ರಿಲ್ 12,:ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ,ಪೋಸ್ಟರ್ ಮತ್ತು ಬ್ಯಾನರನ್ನು ಮುದ್ರಿಸುವ ಮೊದಲು ಅನುಮತಿಯನ್ನು ಕಡ್ಡಾಯವಾಗಿ ಪಡೆದು ಚುನಾವಣೆ ನೀತಿ ಸಂಹಿತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸ್ನೇಹಲ್.ಆರ್ ಅವರು ತಿಳಿಸಿದ್ದಾರೆ.
ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ,ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ,ಪೋಸ್ಟರ್ ಮತ್ತು ಬ್ಯಾನರಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಮುದ್ರಕರು ಪಾಂಪ್ಲೇಟಗಳು ಮತ್ತು ಪೋಸ್ಟರಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು ತಾವು ಮುದ್ರಿಸುವ ಎರಡು ಪ್ರತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಜಿಲ್ಲಾಧಿಕಾರಿಗಳಿಗೆ ಹಾಗೂ ಆರ್‌ಓಗಳಿಗೆ ಸಲ್ಲಿಸಬೇಕು ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕದಂತೆ ಚುನಾವಣೆ ನೀತಿ ಸಂಹಿತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಅವರು ಸೂಚಿಸಿದ್ದಾರೆ.
ಪ್ರತಿ ಪೇಜಿನ ಮುದ್ರಣಕ್ಕೆ ಈಗಾಗಲೇ ಹಣ ನಿಗದಿಪಡಿಸಲಾಗಿದೆ ಕರಪತ್ರ,ಫಲಕ ಪೋಸ್ಟರ್ ಬ್ಯಾನರ್ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು,ಮೊಬೈಲ್ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು ಎಂದು ಅವರು ತಿಳಿಸಿದ್ದಾರೆ.
ಯಾವುದೇ ಜಾತಿ,ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಬ್ಯಾನರ್,ಪ್ಲೆಕ್ಸ್,ಕರಪತ್ರ ಮುದ್ರಣವಾಗದೇ ನಿಯಮವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಚುನಾವಣಾ ಬಹಿಷ್ಕಾರದಂತಹ ಪೋಸ್ಟರ್,ಕರಪತ್ರ ಮತ್ತು ಬ್ಯಾನರ್ ಮುದ್ರಿಸುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು: ಸಮೂಹ ಮಾಧ್ಯಮಗಳಾದ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಪ್ರಚೂರಪಡಿಸಬಹುದಾದ ಜಾಹೀರಾತು,ಪೇಡ್ ನ್ಯೂಸ್ ಗಳ ಬಗ್ಗೆ ನಿಗಾ ಇಡಲಾಗಿದೆ ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ಅಭ್ಯರ್ಥಿಗಳು ಜಾಹೀರಾತು ಪ್ರಕಟಿಸುವ ಮುನ್ನ ಪೂರ್ವಾನುಮತಿ ಪಡೆಯಬೇಕು.
ಅನುಮತಿ ಇಲ್ಲದೇ ಜಾಹೀರಾತು ಪ್ರಕಟಿಸಿದಲ್ಲಿ ಕಾನೂನು ರೀತ್ಯ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಎ.ಪಿ.ಎಮ್.ಸಿ ಸಮಿತಿಗಳ ಮೂಲಕ ನಿಗಾ ಸಹ ಇಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ