ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕೆರೆ ಅಕ್ರಮ ಒತ್ತುವರಿ ತೆರವು

ಉತ್ತರ ಕನ್ನಡ: ಮುಂಡಗೋಡ ತಾಲೂಕಿನ ನಂದಿಗಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಕೆರೆ ಯ ವ್ಯಾಪ್ತಿಯಲ್ಲಿ ಮಾಡಲಾಗಿದ್ದ ಕೆರೆ ಅಕ್ರಮ ಒತ್ತುವರಿ ಯನ್ನು ಮುಂಡಗೋಡ ತಹಶೀಲ್ದಾರ್ ಆದಂತಹ ಶ್ರೀ ಶಂಕರ್ ಗೌಡಿ ಅವರು ತಮ್ಮ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ತೆರವುಗೊಳಿಸಿದ್ದಾರೆ.

ಮುಂಡಗೋಡ ತಾಲೂಕಿನಾದ್ಯಂತ ಇತ್ತೀಚಿನ ವರ್ಷಗಳಲ್ಲಿ ಕೆರೆ ಭೂಭಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗುತ್ತಿದ್ದು, ಅವುಗಳನ್ನು ರಕ್ಷಿಸುವ ಕಾರ್ಯ ನಡೆಯಬೇಕಿದೆ, ಇತ್ತೀಚಿಗೆ ಕರುನಾಡ ಕಂದ ಪತ್ರಿಕೆ ಕೂಡ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಕುರಿತು ವಿಸ್ತೃತ ವರದಿಯನ್ನು ಮಾಡಿತ್ತು, ಈ ನಿಟ್ಟಿನಲ್ಲಿ ತಹಶೀಲ್ದಾರ ಅವರ ಕಾರ್ಯಕ್ಕೆ ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದೆ ರೀತಿ ಮುಂಡಗೋಡ ನಗರದಲ್ಲಿ ಇರುವ ಸುಮಾರು 16 ಕೆರೆಗಳ ಕುರಿತಂತೆ ಕೂಡ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ ಅದರಲ್ಲೂ ವಿಶೇಷವಾಗಿ ತಹಶೀಲ್ದಾರ್ ಕಚೇರಿಗೆ ಕೂಗಳತೆ ದೂರದಲ್ಲಿರುವ ಕಡಲಿಕಟ್ಟೆ ಕೆರೆಯ ಬಗ್ಗೆ ಕಾಳಜಿ ವಹಿಸಬೇಕೆಂದು ಪರಿಸರ ಪ್ರಿಯರು ತಾಲೂಕ ಆಡಳಿತ ವನ್ನು ಒತ್ತಾಯ ಮಾಡುತ್ತಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ