ಚಾಮರಾಜನಗರ/ಹನೂರು:ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಮಾಪುರದ ಜೆಎಸ್ಎಸ್ ಪದವಿ ಪೂರ್ವ ಕಾಲೇಜಿಗೆ ಶೇ.91 ಫಲಿತಾಂಶ ಲಭಿಸಿದೆ. ಕಲಾವಿಭಾಗದಿಂದ 34 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಹಾಗೂ ವಾಣಿಜ್ಯ ವಿಭಾಗದಲ್ಲಿ 48 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತು 42 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸುಗುಣ 552. ಧಾಮಿನಿ 551. ಪವಿತ್ರ ಪಿ 548. ರತಿಕಾ ಕೆ 547 ಹಾಗೂ ಕಲಾವಿ ಭಾಗದಲ್ಲಿ ಲಿಂಗರಾಜು ಎಸ್ 500 ನಂದಾಕುಮಾರ್ ಡಿ 498. ಮೋಹನ್ ಕುಮಾರ್ ಎಸ್ 467. ಶ್ರೀನಿವಾಸ ವಿ 465 ಅಂಕವನ್ನು ಪಡೆದಿದ್ದಾರೆ
4 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ 42 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 18 ದ್ವಿತೀಯ ದರ್ಜೆಯಲ್ಲಿ ಹಾಗೂ 9 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದಾರೆಂದು ಪ್ರಾಂಶುಪಾಲರಾದ ಗಿರಿಯಣ್ಣ ಹಾಗೂ ಉಪನ್ಯಾಸಕರು ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.