ಕಲಬುರ್ಗಿ:ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧದ ಹತ್ತಿರವಿರುವ ಪೂಜ್ಯ ಶ್ರೀ ಗಂಗಾಧರೇಶ್ವರ ಗ್ರಾಮೀಣಾಭಿವೃದ್ಧಿ ವಿದ್ಯಾವರ್ಧಕ ಸಂಘ ಕರಿಕಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ.ಶ್ರೀ ಸ್ವಾಮಿ ವಿವೇಕಾನಂದ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಕಾಲೇಜಿನ ಸಿಬ್ಬಂದಿ ವರ್ಗದವರಿಂದ ಪ್ರಾಂಶುಪಾಲರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯಾದ ಅಯ್ಯಮ್ಮ ಮಹಾಂತೇಶ್ ಚನ್ನೂರ್ 551 ಅಂಕ ,93% ಗಳಿಸುವ ಮೂಲಕ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸಹಾದೇವಿ ಸಿದ್ದಯ್ಯ 537 ಅಂಕ 91% ರೂಪಾ ಯಮನಯ್ಯ 537 ಅಂಕ 91% ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡರೆ ವಾಣಿಜ್ಯ ವಿಭಾಗದಲ್ಲಿ ಐಶ್ವರ್ಯ ಮಹೇಶ್ ಬಿಲ್ಲಾರ್ 493 ಅಂಕ 83% ಪ್ರತಿಶತ ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದಿರುತ್ತಾಳೆ,ಇನ್ನುಳಿದಂತೆ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಚಂದ್ರಕಲಾ ನಿಂಗಪ್ಪ 530 ಅಂಕ 89% ಪ್ರಕಾಶ್ 529 ಅಂಕ 88% ಸಿದ್ದಪ್ಪ ವಿಜಯಲಕ್ಷ್ಮಿ ಈರಣ್ಣ 526 ಅಂಕ 87% ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಒಟ್ಟಾರಿಯಾಗಿ ಶ್ರೀ ಸ್ವಾಮಿ ವಿವೇಕಾನಂದ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನಿಂದ 62 ಜನ ಪರೀಕ್ಷೆಗೆ ಹಾಜರಾದವರ ಪೈಕಿ 15 ಜನ ಉನ್ನತ ಶ್ರೇಣಿ (ಡಿಸ್ಟಿಂಕ್ಷನ್) ನಲ್ಲಿ ತೇರ್ಗಡೆಯಾದರೆ.31 ಜನ ಪ್ರಥಮ ದರ್ಜೆ (ಫಸ್ಟ್ ಕ್ಲಾಸ್) ಯಲ್ಲಿ ತೇರ್ಗಡೆಯಾಗಿದ್ದಾರೆ.14 ಜನ ದ್ವಿತೀಯ ದರ್ಜೆ ಸೆಕೆಂಡ್ ಕ್ಲಾಸ್ ನಲ್ಲಿ ಪಾಸಾಗಿರುತ್ತಾರೆ.
ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಸಾಲಿನ ವಿಷಯವಾರು ಅಂಕ ಹಾಗೂ ಪ್ರತಿಶತ ವಿದ್ಯಾರ್ಥಿಗಳು ಉನ್ನತ ಮತ್ತು ಪ್ರಥಮ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ ಕಾಲೇಜಿನ ಕೀರ್ತಿ ಪತಾಕೆ ಹಾರಿಸಿ ಗೌರವ ತಂದು ಕೊಟ್ಟಿದ್ದಕ್ಕೆ, ಸಂಸ್ಥೆಯ ಅಡಿಯ
ಶ್ರೀ ಮಹಾಲಕ್ಷ್ಮಿ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ|| ಧರ್ಮಣ್ಣ.ಕೆ.ಬಡಿಗೇರ್, ಪೂಜ್ಯ ಶ್ರೀ ಗಂಗಾಧರೇಶ್ವರ ಗ್ರಾಮೀಣಾಭಿವೃದ್ಧಿ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಮಂಜುಳಾ.ಡಿ.ಬಡಿಗೇರ್, ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಮತಿ ನಿಂಗಮ್ಮ ಹಳಿಮನಿ, ಸದಸ್ಯರಾದ ಈಶ್ವರ ಹಿಪ್ಪರಗಿ,ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ
ಸಿದ್ದಲಿಂಗ ಎಸ್ ವಸ್ತಾರಿ ಸೇರಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಇಂದು ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ವಿದ್ಯಾರ್ಥಿಗಳ ಸನ್ಮಾನದ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ಮಂಜುಳಾ.ಡಿ.ಬಡಿಗೇರ್, ಪಿಯುಸಿ ಕಾಲೇಜಿನ ಪ್ರಾಚಾರ್ಯರಾದ ಸಿದ್ದಲಿಂಗ ವಸ್ತಾರಿ,ಶಿಕ್ಷಣ ಶಾಸ್ತ್ರ ಉಪನ್ಯಾಸಕರಾದ ಶರಣಪ್ಪ ಎಚ್ ಕುಮ್ಮನ ಸಿರಸಗಿ,ಸಮಾಜಶಾಸ್ತ್ರ ವಿಷಯದ ಉಪನ್ಯಾಸಕಿಯರಾದ ಸಾವಿತ್ರಿ ಜಿ ಮನಗೂಳಿ, ಹಾಗೂ ಶಾಲೆಯ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವರದಿ-ರಾಜಶೇಖರ ಮಾಲಿ ಪಾಟೀಲ್