ಕಲಬುರ್ಗಿ:ಜೇವರ್ಗಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜೇವರ್ಗಿ ತಾಲೂಕಿನ ಮಂದೆವಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|| ರೇಣುಕಾ ದೇವರಮನಿ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಭಾರತದ ಸಂವಿಧಾನ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮತದಾನ ಮಾಡುವ ಹಕ್ಕು ನೀಡಿದ್ದು.ಭಾರತಿಯ ನಾಗರಿಕ ಪ್ರತಿಯೊಬ್ಬರು ಮತ ಚಲಾಯಿಸಿ.ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು ಮತದಾನ ಜನ ಜಾಗೃತಿ ಅಭಿಯಾನಕ್ಕೆ ನಮ್ಮ ಆರೋಗ್ಯ ಇಲಾಖೆಯಿಂದ ಗ್ರಾಮದ ಜನರಿಗೆ ಜಾಗೃತಿ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ವಯೋವೃದ್ಧರು. ಅಂಗವಿಕಲರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಚುನಾವಣೆ ಆಯೋಗ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ ಇದನ್ನು ಸದ್ಬಳಕೆ ಮಾಡಿಕೊಂಡು ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ ಶ್ರೀಮತಿ ಶ್ವೇತಾ ರೆಡ್ಡಿ ಅವರು ನನ್ನ ಮತ ನನ್ನ ಹಕ್ಕು ಪ್ರತಿಯೊಬ್ಬರೂ ಮತದಾನ ಮಾಡಿ ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬ ಘೋಷಣೆ ಕೂಗಿ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿದರು ತಜ್ಞರಾದ ರಾಜಶೇಖರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ರೇಣುಕಾ ದ್ಯಾಮಾರಿ,ಆರೋಗ್ಯ ನಿರೀಕ್ಷಣಾಧಿಕಾರಿ ಉಲ್ಪತ ಬೇಗಂ,ಸಮುದಾಯದ ಆರೋಗ್ಯಾಧಿಕಾರಿಗಳಾದ ಆಜ್ರೊದ್ದಿನ, ರುಕ್ಸಾರ್, ಭಗವಂತ ಹಾಗೂ ಆಶಾ ಕಾರ್ಯಕರ್ತೆಯರಾದ ಗೀತಾ, ಮಂಜುಳಾ, ಸಂಗೀತಾ, ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದರು.
ವರದಿ –ರಾಜಶೇಖರ ಮಾಲಿ ಪಾಟೀಲ್ ಯಾದಗಿರಿ