ಭದ್ರಾವತಿ: ಬಿಜೆಪಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಪ್ರಣಾಳಿಕೆ ಬಿಡುಗಡೆಗೊಳಿಸಿದೆ.
ಇಂದು ಬೆಳಿಗ್ಗೆ ಹಳೇನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಣಾಳಿಕೆ ಸಮಿತಿಯ ಜಿಲ್ಲಾಸಂಚಾಲಕರು ಹಾಗೂ ಪ್ರಖ್ಯಾತ ವೈದ್ಯರಾದ ಡಾ. ಧನಂಜಯ ಸರ್ಜಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಕೃಷಿ, ಕೈಗಾರಿಕೆ, ಆರೋಗ್ಯ, ಶಿಕ್ಷಣ, ಆಡಳಿತ ಮತ್ತು ಅಭಿವೃದ್ಧಿ ಹಾಗೂ ವಿಶೇಷ ಆದ್ಯತೆಗಳಡಿ ಪ್ರಣಾಳಿಕೆ ಸಿದ್ದಪಡಿಸಲಾಗಿದೆ ಎಂದು ತಿಳಿಸಿದರು.
ವಿಶೇಷವಾಗಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಬೆಳವಣಿಗೆಗೆ ಆದ್ಯತೆ, ಕೆಆರ್‌ಎಸ್ ಮಾದರಿಯಲ್ಲಿ ಭದ್ರಾ ಜಲಾಶಯ ಸಮಗ್ರ ಅಭಿವೃದ್ಧಿಯೊಂದಿಗೆ ಸರ್.ಎಂ ವಿಶ್ವೇಶ್ವರಾಯನವರ ಬೃಹತ್ ಪ್ರತಿಮೆ ಸ್ಥಾಪನೆ, ಕೈಗಾರಿಕಾ ವಸಾಹತುಗಳ ಮೇಲ್ದರ್ಜೆ ಮತ್ತು ಗಾರ್ಮೆಂಟ್ಸ್ ಗಳ ಸ್ಥಾಪನೆ, ಮಹಿಳೆಯರಿಗೆ ಕೈಗಾರಿಕಾ ಕೇಂದ್ರಗಳಿಗೆ ತೆರಳಲು ಬಸ್ ವ್ಯವಸ್ಥೆ, ಸರ್ಕಾರಿ ಹೆರಿಗೆ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆದ್ಯತೆ, ಸುಸಜ್ಜಿತ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ, ಮೆಡಿಕಲ್ ಹಾಗು ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ, 18 ವರ್ಷ ಪೂರ್ಣಗೊಂಡವರಿಗೆ ಕಾಲೇಜುಗಳಲ್ಲೇ ಮತದಾರರ ಗುರುತಿನ ಚೀಟಿ, ವಾಹನ ಚಾಲನಾ ಪರವಾನಿಗೆ(ಡಿ.ಎಲ್) ನೀಡಲು ಆದ್ಯತೆ ಸೇರಿದಂತೆ ಹಲವು ಭರವಸೆಗಳನ್ನು ಈ ಬಾರಿ ಬಿಜೆಪಿ ಭದ್ರಾವತಿ ಕ್ಷೇತ್ರದ ಚುನಾವಣೆ ಸಂಬಂಧ ಪ್ರಣಾಳಿಕೆಯಲ್ಲಿ ಘೋಷಿಸಿದೆ.
ಪಕ್ಷದ ಅಭ್ಯರ್ಥಿ ಮಂಗೋಟೆ ರುದ್ರೇಶ್ ಮಾತನಾಡಿ, ಈ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಣಾಳಿಕೆಯಲ್ಲಿರುವ ಬಹುತೇಕ ಭರವಸೆಗಳನ್ನು ಈಡೇರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ತಾಲ್ಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ, ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ಎಂ. ಮಂಜುನಾಥ್(ಸಿಮೆಂಟ್ ), ಆರ್.ಎಸ್ ಶೋಭಾ, ಎಂ.ಎಸ್ ಸುರೇಶಪ್ಪ, ಮಂಜುನಾಥ್ ಕದಿರೇಶ್, ಸಂಪತ್‌ರಾಜ್ ಬಾಂಟಿಯಾ, ಸುನಿಲ್ ಗಾಯಕ್‌ವಾಡ್, ಕವಿತಾ ರಾವ್, ಕೆ.ಎನ್ ಶ್ರೀಹರ್ಷ, ಬಿ.ಎಸ್ ಶ್ರೀನಾಥ್, ಕವಿತಾ ಸುರೇಶ್ ಮುಂತಾದವರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.