ಭದ್ರಾವತಿ : ತಾಲ್ಲೂಕು ಆಡಳಿತ,ತಾಲ್ಲೂಕು ಪಂಚಾಯತಿ, ನಗರಸಭೆ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರ ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.
ವಿಧಾನಸಭಾ ಕ್ಷೇತ್ರ ಮತದಾನ ಪ್ರಮಾಣದಲ್ಲಿ ಕುಠಿತಗೊಂಡಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲೆಡೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಲಾಗುತ್ತಿದೆ.
ನಗರದ ಅಂಬೇಡ್ಕರ್ ವೃತ್ತದಿಂದ ತಾಲ್ಲೂಕು ಪಂಚಾಯಿತಿ ಆವರಣದವರೆಗೂ ಬೈಕ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ತಹಶೀಲ್ದಾರ್ ಸುರೇಶ್ ಆಚಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಎಂ. ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ನಗರಸಭೆ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಚೇರಿ, ಗ್ರಾಮ ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.