ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಶಿವರಾಜ್ ಎಸ್ ತಂಗಡಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಲ್ಲಿಕಾರ್ಜುನಗೌಡ ಹೊಸಮನಿ ಒತ್ತಾಯ

ಕೊಪ್ಪಳ/ಕಾರಟಗಿ:ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ್ ಎಸ್ ತಂಗಡಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೇಸ್ ಯುವ ಮುಖಂಡ ಸಿದ್ದಾಪುರದ ಮಲ್ಲಿಕಾರ್ಜುನಗೌಡ ಹೊಸಮನಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇದುವರೆಗೂ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಕಲ್ಯಾಣ (ಹೈದರಾಬಾದ್‌) ಕರ್ನಾಟಕ ಭಾಗದ ಶಾಸಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿಲ್ಲಾ, ಸರ್ವಜನಾಂಗದ ಹಿತಚಿಂತಕರು, ಪ್ರಾದೇಶಿಕ ಸಮತೋಲನದ ಯೋಚಕರು, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಮೇಲೆ ಕಾಳಜಿ ಇರುವ ಸಿದ್ಧರಾಯ್ಯನವರ ನೇತೃತ್ವದ ಸರಕಾರದಲ್ಲಿ ಕಲ್ಯಾಣ (ಹೈದ್ರಾಬಾದ್) ಕರ್ನಾಟಕ ಭಾಗಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು, ಅದರಲ್ಲಿ ವಿಶೇಷವಾಗಿ ಇಡೀ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮತಗಳನ್ನು ಪಡೆದು, ಜನರ ಮನಸ್ಸುಗಳನ್ನು ಗೆದ್ದು ಬಂದಿರುವ, ಅಭಿವೃದ್ಧಿ ಹರಿಕಾರ, ಸೌಜನ್ಯಯುತ ರಾಜಕಾರಣಿ, ಸರ್ವಜನಾಂಗದ ಪ್ರೀತಿಗೆ ಪಾತ್ರರಾಗಿರುವ ಶಿವರಾಜ್ ತಂಗಡಗಿ ಅವರಿಗೆ ಬೃಹತ್ ನೀರಾವರಿ ಅಥವಾ ಲೋಕೋಪಯೋಗಿ ಇಲಾಖೆಯ ಸಚಿವ ಸ್ಥಾನದ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಲ್ಲಿಕಾರ್ಜುನಗೌಡ ಹೊಸಮನಿ ಅವರು ಆಗ್ರಹಿಸಿದ್ದಾರೆ.

ಈಗಾಗಲೇ ಹೈದರಾಬಾದ್‌ ಕರ್ನಾಟಕ ಭಾಗವು ಅನೇಕ ಸೌಲಭ್ಯಗಳಿಂದ ವಂಚಿತವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಔದ್ಯೋಗಿಕ ದೃಷ್ಟಿಯಿಂದ ಹಿಂದುಳಿದಿದೆ. ಹೀಗಾಗಿ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಸಂವಿಧಾನದ ವಿಧಿ 371 (ಜೆ) ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವುದಕ್ಕಾಗಿ ಹಾಗೂ ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿ, ಈ ಭಾಗದ ರೈತರು ನೀರಿನ ಕೊರತೆ ಅನುಭವಿತ್ತಿರುವುದನ್ನು ತಪ್ಪಿಸಲು,ತುಂಗಭದ್ರಾ ಜಲಾಶಯಕ್ಕೆ ಸಮನಾಂತರ ಜಲಾಶಯಗಳನ್ನು ನಿರ್ಮಿಸಲು ಶಿವರಾಜ್ ತಂಗಡಗಿ ಅವರನ್ನು ಉಪಮುಖ್ಯಮಂತ್ರಿಯಾಗಳನ್ನಾಗಿ ಮಾಡಬೇಕು.

ಕೊಪ್ಪಳ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಬೇಕಿವೆ. ಹೀಗಾಗಿ ಮೂರು ಬಾರಿ ಶಾಸಕರಾಗಿ, ವಿವಿಧ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿರುವ, ಅನುಭವಿ ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ್ ತಂಗಡಗಿ ಅವರಿಗೆ ಈ ಬಾರಿ ಬೃಹತ್ ನೀರಾವರಿ ಅಥವಾ ಲೋಕೋಪಯೋಗಿ ಇಲಾಖೆಯ ಸಚಿವ ಸ್ಥಾನದ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಆಮೂಲಕ ಶಿವರಾಜ್ ತಂಗಡಗಿ ಅವರ ಅನುಭವ ಸರ್ಕಾರದ ಮಟ್ಟದಲ್ಲಿ ಮತ್ತು ವಿಶೇಷವಾಗಿ ಹಿಂದುಳಿದ ಪ್ರದೇಶ ಎಂಬ ಹಣೆ ಪಟ್ಟಿ ಹೊಂದಿರುವ
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಉಪಯೋಗವಾಗುತ್ತದೆ. ಹೀಗಾಗಿ ಶಿವರಾಜ್ ತಂಗಡಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲೇಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ