ಚಾಮರಾಜನಗರ/ಹನೂರು:ತಾಲ್ಲೂಕಿನ ದಿನ್ನಳ್ಳಿ ಗ್ರಾಮದಲ್ಲಿ 2 ಎಕರೆ ಜೋಳ ಬೆಳೆದಿದ್ದ ಜಮೀನಿಗೆ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿ ಸಂಪೂರ್ಣವಾಗಿ ಬೆಳೆಯನ್ನು ನಾಶಪಡಿಸಿರುವ ಘಟನೆ ನೆಡೆದಿದೆ.
ಗ್ರಾಮದ ಸರ್ವೆ ನಂಬರ್ 301/A ರಲ್ಲಿ ಸೈಯದ್ ಗಫೂರ್ ಎಂಬ ರೈತನ ಜಮೀನಿನಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದು, ಸುಮಾರು 2 ಎಕರೆ ಜೋಳದ ಫಸಲು ನಾಶವಾಗಿರುವ ಬಗ್ಗೆ ವರದಿಯಾಗಿದೆ. ಸೋಮವಾರ ತಡ ರಾತ್ರಿ ಈ ಘಟನೆ ನಡೆದಿದ್ದು,ಕೈಗೆ ಬಂದ ಬೆಳೆಗಳು ಆನೆಗಳ ದಾಳಿಯಿಂದ ಅಪಾರ ಪ್ರಮಾಣದಲ್ಲಿ ನಾಶವಾಗಿದೆ,ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಈ ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು,ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.
ವರದಿ:ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.