ಭದ್ರಾವತಿ: ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಲಭಿಸಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರುಕ್ಷೇತ್ರದ ಮತದಾರರಿಗೆ ಭರವಸೆ ನೀಡಿರುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ರವರಿಗೆ ಉನ್ನತ ಸಚಿವ ಸ್ಥಾನ ನೀಡಲೇಬೇಕೆಂದು ಸಂಗೊಳ್ಳಿ ರಾಯಣ್ಣ ಯುವಪಡೆ ವತಿಯಿಂದ ಆಗ್ರಹಿಸಲಾಯಿತು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾಜದ ನಾಯಕರು ಹಾಗೂ ರಾಜಕೀಯ ಮುತ್ಸದ್ದಿಯಾಗಿರುವ ಸಿದ್ದರಾಮಯ್ಯನವರು ಶನಿವಾರ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.
ಕ್ಷೇತ್ರದ ಶಾಸಕರಾಗಿ 4ನೇ ಬಾರಿಗೆ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್ ರವರಿಗೆ ಈ ಬಾರಿ ಕೈಗಾರಿಕಾ ಸಚಿವ ಸ್ಥಾನ ನೀಡಬೇಕು. ವಿಐಎಸ್‌ಎಲ್ ಮತ್ತು ಎಂಪಿಎಂ ಎರಡೂ ಕಾರ್ಖಾನೆಗಳು ಅಭಿವೃದ್ಧಿಯಾಗಬೇಕು.ಈಗಾಗಲೇ ಸಂಗಮೇಶ್ವರ್‌ರವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಎಂಪಿಎಂ ಕಾರ್ಖಾನೆ ಪುನರ್ ಆರಂಭಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದಾರೆ.ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯುವಪಡೆ ಅಧ್ಯಕ್ಷ ದೊಡ್ಮನೆ ನಾಗಭೂಷಣ್,ಗೌರವ ಅಧ್ಯಕ್ಷ ಅಭಿಲಾಷ್, ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಹೆಚ್. ರವಿಕುಮಾರ್,ನಗರಸಭಾ ಸದಸ್ಯರಾದ ಕಾಂತರಾಜ್, ಆರ್. ಶ್ರೇಯಸ್,ಪ್ರಮುಖರಾದ ಶಿವಣ್ಣಗೌಡ, ಸುನಿಲ್‌ಕುಮಾರ್,ಶ್ರೀನಿವಾಸ್,ಗೋಪಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ:ಕೆ ಆರ್ ಶಂಕರ್ ಭದ್ರಾವತಿ