ಭದ್ರಾವತಿ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಕಾರಣಕ್ಕೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಿದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ 8 ಮಂದಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ನಾಡಿನ ಜನರ ಅಪೇಕ್ಷೆಯಂತೆ ನೂತನ ಜನಹಿತ ಕಾಯುವ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕರುನಾಡಿನ ನೂತನ ಸರ್ಕಾರ ಉತ್ತಮ ಆಡಳಿತ ನೀಡುವ ವಿಶ್ವಾಸವನ್ನು ಕಾಂಗ್ರೇಸ್ ಪಕ್ಷದ ಮುಖಂಡರು, ಕಾರ್ಯಕರ್ತರು ವ್ಯಕ್ತಪಡಿಸಿದರು.
ಭದ್ರಾವತಿಯ ಮಾಧವಾಚಾರ್ ವೃತ್ತ ಮತ್ತು ರಂಗಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಲಾಯಿತು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ನಗರಸಭಾ ಸದಸ್ಯರುಗಳಾದ ಜಾರ್ಜ್, ಟಿಪ್ಪು ಸುಲ್ತಾನ್, ಬಷೀರ್ ಅಹಮದ್, ಮಾಜಿ ಅಧ್ಯಕ್ಷೆ ವೈ. ರೇಣುಕಮ್ಮ, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ಆಂಜನಪ್ಪ, ಪಕ್ಷದ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜುಳಾ ರಾಮಚಂದ್ರ, ರೂಪಾನಾರಾಯಣ, ಮುಖಂಡರಾದ ರಮಾಕಾಂತ್, ಪ್ರಕಾಶ್‌ರಾವ್, ಕೇಶವ, ಅಯೂಬ್ ಖಾನ್ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
