ಭದ್ರಾವತಿ:ಮೆಸ್ಕಾಂ ನಗರ ಉಪ ವಿಭಾಗ ಘಟಕ -3 ವ್ಯಾಪ್ತಿಯಲ್ಲಿ ನಗರಸಭೆ ಪೌರಾಯುಕ್ತರು ಹೊಸ ಸೇತುವೆ ಕಾಮಗಾರಿ ನಿರ್ವಹಿಸುವಲ್ಲಿ ಮಾರ್ಗ ಬದಲಾವಣೆ ಕಾಮಗಾರಿಗೆ ಸ್ವಯಂ ಅರ್ಥಿಕ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇ.24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಗರಸಭೆ ವ್ಯಾಪ್ತಿಯ ಹೆಬ್ಬಂಡಿ, ಲಕ್ಷ್ಮೀಪುರ, ಐ ಟಿ ಐ ಕಾಲೇಜ್, ಕಡದಕಟ್ಟೆ, ಹೆಬ್ಬಂಡಿ ತಾಂಡ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
