ರಾಯಚೂರು ಜಿಲ್ಲೆಯ ಲಿಂಗಸೂರು ವಿಧಾನಸಭಾ ಕ್ಷೇತ್ರಕ್ಕೆ ಮೂರು ಬಾರಿ ಆಯ್ಕೆಯಾದ ಸನ್ಮಾನ್ಯ ಶ್ರೀ ಡಾ.ಮಾನಪ್ಪ ಡಿ ವಜ್ಜಲರು ಇಂದು ತಾಲೂಕು ಪಂಚಾಯಿತಿ ಕೊಠಡಿ ಪೂಜಾ ಕಾರ್ಯಕ್ರಮ ನೆರವೇರಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಪ್ರತಿ ಇಲಾಖೆಯೂ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಜೊತೆಗೆ ಇಲಾಖೆವಾರು ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವೀರನಗೌಡ ಪಾಟೀಲ್ ಲೆಕ್ಕಿಹಾಳ ಹಾಗೂ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯ ಕರ್ತರು ಭಾಗಿಯಾಗಿದ್ದರು.
-ಪುನೀತಕುಮಾರ