ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಆರೋಗ್ಯ ಇಲಾಖೆ ಕೆ ಎಚ್ ಪಿ ಟಿ ಇವರ ಸಂಯೋಗದಲ್ಲಿ ಅಗ್ನಿ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಕ್ಷೇತ್ರ ಪ್ರಗತಿಯಲ್ಲಿರುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಆಯೋಜಿಸಲಾಯಿತು.
ಆರೋಗ್ಯ ಅಮೃತ ಅಭಿಯಾನದಡಿ ಮೇ 2023 ರಿಂದ ಜೂನ್ 22 ರವರೆಗೆ ನರೇಗಾ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲು ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಲಾಯಿತು.
ಕಾಮಗಾರಿ ಸ್ಥಳದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಲ್ಲಿ 98 ಜನರಿಗೆ ಬಿಪಿ,ಶುಗರ್, ಟಿಬಿ,ಅನಿಮಿಯಾ ಕಾಯಿಲೆಗಳ ತಪಾಸಣೆ ಮಾಡಲಾಯಿತು
ಈ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಐ ಈ ಸಿ ಸಂಯೋಜಕರು ಆರೋಗ್ಯ ಇಲಾಖೆ ಅಧಿಕಾರಿಗಳು ಕೆಎಚ್ ಪಿಟಿ ಸಂಯೋಜಕರು DEO ಬಿಲ್ ಕಲೆಕ್ಟರ್ ಬಿ ಎಫ್ ಟಿ ಗ್ರಾಮ ಕಾಯಕ ಮಿತ್ರ ಆಶಾ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಸ್ಥಳದಲ್ಲಿ ಹಾಜರಿದ್ದರು.
-ಸಂತೋಷ ನಾಯಕ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.