ಗೋಲಗುಮ್ಮಟ:ವಿಜಯಪುರದಲ್ಲಿ ಸ್ಥಿತವಾಗಿರುವ ಮೊಹಮ್ಮದ್ ಆದಿಲ್ ಶಾ (೧೬೨೭-೧೬೫೭) ಅವರ ಸಮಾಧಿ ಬಿಜಾಪುರವಲ್ಲದೆ ಬೀದರ,ಗೋಲ್ಕೊಂಡ, ಗುಲ್ಬರ್ಗಾಗಳನ್ನೊಳಗೊಳ್ಳುವ ‘ಗೋಲ್ ಗುಂಬಜ್’ ಬಿಜಾಪುರದ ಅತ್ಯಂತ ಆಕರ್ಷಕವಾದ ಸ್ಮಾರಕ.
ಇದನ್ನು ಮುಹಮ್ಮದ್ ಆದಿಲ್ ಷಾ,(1627-56) ತನ್ನ ಸಮಾಧಿ ಹಾಗೂ ಸ್ಮಾರಕವಾಗಿ ನಿರ್ಮಿಸಿದನು ಅದರ ಕಟ್ಟುವಿಕೆಯ ಹೊಣೆ ಹೊತ್ತವನು,ದಾಬುಲ್ ನ ಪ್ರಸಿದ್ಧ ವಾಸ್ತುಶಿಲ್ಪಯಾದ ಯಾಕುಬ್. ಗೋಲ್ ಗುಂಬಜ್ ನ ತಳಹದಿಯು 205 ಅಡಿಗಳ ಚಚ್ಚೌಕ,ಅದರ ಸುತ್ತಲೂ ಇರುವ ಗೋಡೆಗಳು 198 ಅಡಿ ಎತ್ತರವಾಗಿವೆ ಈ ಗೋಡೆಗಳ ಮೇಲೆ ಗುಂಬಜವು ಕಣ್ಣಿಗೆ ಕಾಣುವ ಯಾವುದೇ ಆಸರೆಯೂ ಇಲ್ಲದೆ ನಿಂತಿದೆ,ಗೋಡೆಗಳಿಂದ ಸುತ್ತುವರಿಯಲ್ಪಟ್ಟಿದೆ.ಗೋಲ್ ಗುಂಬಜ್, ಜಗತ್ತಿನಲ್ಲಿರುವ ಅತ್ಯಂತ ದೊಡ್ಡ ಸಿಂಗಲ್ ಛೇಂಬರ್ ಸ್ಟ್ರಕ್ಚರ್ ಗಳಲ್ಲಿ ಒಂದು ಇಲ್ಲಿರುವ ಗೋಡೆಗಳಲ್ಲಿ ಪ್ರತಿಯೊಂದರಲ್ಲಿಯೂ ಮೂರು ಕಮಾನುಗಳನ್ನು ರಚಿಸಲಾಗಿದೆ.
ಗೋಲ್ ಗುಂಬಜ್’ನ ಮಧ್ಯದಲ್ಲಿರುವ ಗೋಳಾಕೃತಿಯ ಶಿಖರವು ಯಾವುದೇ ಕಂಬ ಅಥವಾ ರಚನೆಯನ್ನು ಆಧರಿಸಿ ನಿಂತಿಲ್ಲ. ರೋಮ್ ನಗರದಲ್ಲಿರುವ ಸೈಂಟ್ ಪೀಟರ್ ಬ್ಯಾಸಿಲಿಕಾದ ಡೋಮನ್ನು ಹೊರತುಪಡಿಸಿದರೆ,ಇದು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದು.
ಈ ಗುಮ್ಮಟ ನಿಂತಿರುವುದು ಪೆಂಡಾಂಟಿವ್ ಎಂಬ ತತ್ವದ ಮೇಲೆ ಪರಸ್ಪರ ಕ್ರಾಸ್ ಆಗುವ ಕಮಾನುಗಳ ವ್ಯವಸ್ಥೆಯೇ ಈ ಡೋಮಿಗೆ ಆಧಾರವಾಗಿರುತ್ತದೆ ಭಾರತದಲ್ಲಿ ಬೇರೆಲ್ಲಿಯೂ ಈ ಬಗೆಯ ರಚನೆಯಿಲ್ಲ.
ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ,ಅದರಂತೆ ೮ ಅಂತಸ್ತುಗಳಿವೆ.ಇದು ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್ (ಇಟಲಿಯ ರೋಮ್ ನಗರದ ಬೆಸಿಲಿಕಾ ಚರ್ಚ್-ವಿಶ್ವದ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್)ಇದರ ವಿಶೇಷ ಆಕರ್ಷಣೆಯೆಂದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ ಏಳು ಬಾರಿ ಪ್ರತಿಧ್ವನಿತವಾಗುತ್ತದೆ!ಹಾಗೆಯೆ ಇಲ್ಲಿರುವ “ಪಿಸುಗುಟ್ಟುವ ಶಾಲೆ”ಯಲ್ಲಿ ಅತಿ ಸಣ್ಣ ಶಬ್ದವೂ ೩೭ ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ ಇದರ ಹತ್ತಿರ ಬಿಜಾಪುರ ಆದಿಲ್ ಶಾಹಿಗಳಿಗೆ ಸಂಭದಿಸಿದ ವಸ್ತು ಸಂಗ್ರಾಹಾಲಯವೂ ಇದೆ.
ಭಾರತದ ಪ್ರಾಚೀನ ಸ್ಮಾರಕಗಳ ಅಧ್ಯಯನಕ್ಕೆ ಸ್ಮಾರಕಗಳ ಕೊಡುಗೆ ನಮ್ಮಲ್ಲಿರುವ ವೈವಿಧ್ಯಮಯ,ಸಂಸ್ಕೃತಿ -ಸಂಪ್ರದಾಯಕ್ಕೆ ಸಂಬಂಧಪಟ್ಟ ಸಾಕಷ್ಟು ಐತಿಹಾಸಿಕ ರಚನೆಗಳು ಇವು ನಮ್ಮ ದೇಶಕ್ಕೆ ಅಂತಾರಾಷ್ಟ್ರೀಯ ವಲಯದಲ್ಲಿ ಸಾಕಷ್ಟು ಮಹತ್ವವನ್ನು ಒದಗಿಸಿವೆ ಈ ಸ್ಮಾರಕಗಳು ನಮ್ಮ ಹೆಮ್ಮೆಯ ಪ್ರತೀಕ ಇವುಗಳನ್ನು ಸಂರಕ್ಷಿಸಿಕೊಂಡು ಹೋಗಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ.
-ಉಸ್ಮಾನ್ ಭಾಗವಾನ