ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಿಂದ ಎಲ್ಲಾ ಪ್ರಕರಣಗಳು ಸಂಧಾನ

ಯಾದಗಿರಿ:ಜುಲೈ 8 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಧಾನ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶ್ರೀ ಜಿ.ನಂಜುಂಡಯ್ಯ ಅವರು ಹೇಳಿದರು.
ಜಿಲ್ಲಾ ಹಾಗೂ ತಾಲೂಕಿನ ಎಲ್ಲಾ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳುವ ಕುರಿತಂತೆ ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು ಇದೇ ಜುಲೈ 8 ರಂದು ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ರಾಜಿಯಾಗುವಂತಹ ಎಲ್ಲಾ ಪ್ರಕರಣಗಳನ್ನು ಹಾಗೂ ವ್ಯಾಜ್ಯಗಳನ್ನು ರಾಜಿಸಂಧಾನದ ಮೂಲಕ ಸರಿಪಡಿಸಲಾಗುತ್ತಿದ್ದು. ಕಕ್ಷಿದಾರರು ಹಾಗೂ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ರಾಷ್ಟ್ರೀಯ ರಾಜ್ಯ ಜಿಲ್ಲಾ ಹಾಗೂ ತಾಲೂಕ ಕಾನೂನು ಸೇವೆಗಳ ಪ್ರಾಧಿಕಾರಗಳಿಂದ ಲೋಕ ಅದಾಲತ್ ಆಯೋಜಿಸಲಾಗಿದೆ. ಇದರಲ್ಲಿ ಕ್ರಿಮಿನಲ್ ಪ್ರಕರಣಗಳು ಮತ್ತು ಅಪರಾಧಿಕ ಪ್ರಕರಣಗಳು,ಸಿವಿಲ್ ಪ್ರಕರಣಗಳು,ಕೌಟುಂಬಿಕ ವ್ಯಾಜ್ಯ, ಹಣಕಾಸಿನ ವ್ಯಾಜ್ಯಗಳು ಸೇರಿದಂತೆ ವಿವಿಧ ಪ್ರಕರಣಗಳು ಕಕ್ಷಿದಾರರು ವಕೀಲರ ಒಪ್ಪಿಗೆ ಮೇರೆಗೆ ರಾಜಿಸಂಧಾನದ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲಾಗುತ್ತದೆ ಎಲ್ಲಾ ಪ್ರಕರಣಗಳನ್ನು ಸಂಪೂರ್ಣವಾಗಿ ಇತ್ಯರ್ಥಗೊಂಡು ಉಭಯ ವ್ಯಕ್ತಿಗಳಿಗೆ ನ್ಯಾಯ ದೊರೆಯಲಿದ್ದು,ಮೇಲ್ಮನವಿಗೆ ಅವಕಾಶವಿರುವುದಿಲ್ಲವೆಂದು ಅವರು ತಿಳಿಸಿದರು.
ರಾ‌ಷ್ಟೀಯ ಲೋಕ ಅದಾಲತ್ ದಲ್ಲಿ ಇತ್ಯರ್ಥಪಡಿಸಿಕೊಳ್ಳುವ ಪ್ರಕರಣಗಳಲ್ಲಿ ವಿಶೇಷವಾಗಿ ಸಿವಿಲ್ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಸಂದಾಯ ಮಾಡಿದ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತಿದೆ. ವೈವಾಹಿಕ,ಕುಟುಂಬ ನ್ಯಾಯಾಲಯ, ವಿಚ್ಛೇದನ ಹೊರತುಪಡಿಸಿ ಪ್ರಕರಣಗಳನ್ನು ಶೀಘ್ರವಾಗಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಕುಟುಂಬಗಳಲ್ಲಿನ ಭಿನ್ನಾಭಿಪ್ರಾಯ,ಭೇದಭಾವ ತೊಡೆದುಹಾಕಿ ಉತ್ತಮ ಭಾಂದವ್ಯ ರೂಪಿಸಲು ಸಾಧ್ಯವಾಗಲಿದೆ ಅದರಂತೆ ಬಹುಕಾಲಾವಧಿಯ ಪ್ರಕರಣಗಳು ಇತ್ಯರ್ಥಕೂ ಅನುಕೂಲವಾಗುವ ಹಿನ್ನೆಲೆಯಲ್ಲಿ ಸಮಾಧಾನದಿಂದ, ಶಾಂತಿಯುತವಾಗಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು,ರಾಜಿ ಸಂಧಾನದ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಟೋಲ್ ಫ್ರೀ ಸಂಖ್ಯೆ 180042590900 ಹಾಗೂ ಜಿಲ್ಲೆಯ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳ ದೂ.ಸಂ.08473 – 253243 ಗೆ ಸಂಪರ್ಕಿಸಬಹುದು ಎಂದು ಹೇಳಿದರು.
ಇಲ್ಲಿಯವರೆಗೆ ಕ್ರಿಮಿನಲ್, ಸಿವಿಲ್, ಕೌಟುಂಬಿಕ,ಎನ್.ಐ ಆಕ್ಟ್ ಅಡಿಯ ಸೆಕ್ಷನ್ 138 ರಲ್ಲಿನ ಪ್ರಕರಣಗಳು,ವೈವಾಹಿಕ ಕಲಹದ ಪ್ರಕರಣಗಳು,ಭೂ ಸ್ವಾಧೀನ ಪ್ರಕರಣಗಳು ಸೇರಿದಂತೆ ವಿವಿಧ ರೀತಿಯ ಸುಮಾರು 17942 ಪ್ರಕರಣಗಳು ಇಲ್ಲಿಯವರೆಗೆ ಬಾಕಿ ಉಳಿದ ಪ್ರಕರಣಗಳಾಗಿವೆ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳು ಇತ್ಯರ್ಥಪಡಿಸಲು ಗುರುತಿಸಲಾಗಿದೆ.
ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಒಟ್ಟು 150 ಪಿ.ಎಲ್.ಸಿ ಪ್ರಕರಣಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ನೊಂದಣಿಯಾಗಿದ್ದು, ಕಳೆದ ಎರಡು ರಾಷ್ಟ್ರೀಯ ಲೋಕ ಅದಾಲತ್ ಗಳಲ್ಲಿ ಕ್ರಮವಾಗಿ 7194 ಹಾಗೂ 5169 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ರವೀಂದ್ರ ಹೊನೋಲೆ ಅವರು ಸ್ವಾಗತಿಸಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಯಾದಗಿರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ