ಭದ್ರಾವತಿ: ನಗರದ ಹೊಸಮನೆ ನಿವಾಸಿ ಸಾಹಿತಿ, ಲೇಖಕ ಹೆಚ್ ಎಂ ರವಿಶಂಕರ್(63) ಬುಧವಾರ ನಿಧನ ಹೊಂದಿದರು.
ಮೃತರು ಪತ್ನಿ ಜ್ಯೋತಿ ಮತ್ತು ಬಿಂಬ ಹಾಗೂ ಶುಭ ಎಂಬ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರವಿಶಂಕರ್ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
“ರಶಂತಿ” ಎಂಬ ಕಾವ್ಯನಾಮದೊಂದಿಗೆ ಅನೇಕ ಕವನಗಳನ್ನು ರಚಿಸಿದ್ದರು. ರವಿಶಂಕರ್‌ರವರು ಸಾಹಿತಿಯಾಗಿದ್ದು, ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಈ ಹಿಂದೆ ವಿಜಯ ಟೈಮ್ಸ್ ಆಂಗ್ಲ ಪತ್ರಿಕೆಯ ವರದಿಗಾರರಾಗಿಯೂ ಸೇವೆ ಸಲ್ಲಿಸಿದ್ದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಹಾಗೂ ತರುಣ ಭಾರತಿ ವಿದ್ಯಾಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಹೆಚ್ ಎಂ ರವಿಶಂಕರ್ ರವರ ನಿಧನಕ್ಕೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ತೀವ್ರ ಸಂತಾಪ ಸೂಚಿಸಿವೆ.
ಬುಧವಾರ ಸಂಜೆ ತಾಲ್ಲೂಕಿನ ತಿಮಲಾಪುರ ಗ್ರಾಮದ ಮೃತರ ತೋಟದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.