ಯಾದಗಿರಿ: ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಓ ಗರಿಮಾ ಪನ್ವಾರ ನರೇಗಾ ಯೋಜನೆ ಅಡಿಯಲ್ಲಿ ಹೊರಗುತ್ತಿಗೆ ನೌಕರರ ಕಾರ್ಯ ನಿರ್ವಾಹಿಸುತ್ತಿರುವ ಸಿಬ್ಬಂದಿಗಳನ್ನು ತಾಲೂಕುವಾರು ಸ್ಥಳ ಬದಲಾವಣೆ ಮಾಡಿದ ಕಾರ್ಯ ನಿರ್ವಹಣಾಧಿಕಾರಿಗಳಾದ ಶ್ರೀಮತಿ ಗರಿಮಾ ಪನ್ವಾರ ಆದೇಶ ಹೊರಡಿಸಿದ್ದಾರೆ. ಒಂದೇ ಜಾಗದಲ್ಲಿ ಮತ್ತು ಒಂದೆರಡು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಬೇರೆಡೆ ವರ್ಗಾವಣೆ ಮಾಡಿರುವುದು ಗ್ರಾಮೀಣ ಭಾಗದ ಜನರು ಸಂತಸ ವ್ಯಕ್ತಪಡಿಸಿದರು.
ಪ್ರತಿ ಒಂದು ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ನರೇಗಾ ತಾಂತ್ರಿಕ ಸಂಯೋಜಕರು ಸೇರಿದಂತೆ ಇತರ ಅಧಿಕಾರಿಗಳು ಕೆಲವು ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿರುವ. ಜಿಲ್ಲಾ ಕೇಂದ್ರವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡಿರುವುದು ಕಂಡು ಬಂದಿರುತ್ತದೆ. ಇದರಿಂದ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತಾಗಿದೆ ಎಂದು ಹೇಳಿದರು.
ಸಿಇಓ ಗರಿಮಾ ಪನ್ವಾರ ಅವರು ರಾಜಕೀಯ ನಾಯಕರ ಒತ್ತಡಕ್ಕೆ ಮಣಿಯುತ್ತಾರಾ ಕಾದು ನೋಡಬೇಕಾಗಿದೆ. ನರೇಗಾ ಅಧಿಕಾರಿಗಳು ಒಂದೇ ಜಾಗದಲ್ಲಿ ಸುಮಾರು ವರ್ಷಗಳಿಂದ ಝಂಡಾ ಊರಿರುವುದು ರಿಂದ ಸಿಇಓ ಒಳ್ಳೆಯ ನಿರ್ಧಾರ ಕೈಗೊಂಡಿರುವ ಕಾರ್ಯ ನಿರ್ವಾಹಕ ಅಧಿಕಾರಿಗಳು ರಾಜಕೀಯ ನಾಯಕರ ಹಾಗೂ ತಾಲೂಕು ಅಧಿಕಾರಿಗಳ ಒತ್ತಡಕ್ಕೆ ಮಣಿದು ಮತ್ತೆ ಮೂಲ ಜಾಗದಲ್ಲೇ ಮುಂದುವರಿಸುವರು ಎನ್ನುವುದು ಭಯ ಗ್ರಾಮೀಣ ಭಾಗದ ಜನರಿಗೆ ಕಾಡುತ್ತಿದೆ. ತಾಲೂಕ ಅಧಿಕಾರಿಗಳ ಕೈವಾಡವಿದೆ ಎಂದು ಹೇಳಲಾಗುತ್ತಿದ್ದು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯಿತಿಯಲ್ಲಿ ಕೆಲ ಬದಲಾವಣೆ ತರುವ ಪ್ರಯತ್ನದಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ. ತಾಲೂಕುವಾರು ವರ್ಗಾವಣೆ ಜೊತೆಗೆ ಪಿಡಿಓ ಅವರನ್ನು ಸ್ಥಳಾಂತರ ಮಾಡಬೇಕಾಗಿದೆ.
ಆದರೆ ಸಿಇಓ ಗರಿಮಾ ಪನ್ವಾರ ಅವರು ರಾಜಕೀಯ ನಾಯಕರ ಒತ್ತಡಕ್ಕೆ ಮಣಿಯುತ್ತಾರಾ ಎಂದೂ ಕಾದು ನೋಡಬೇಕಾಗಿದೆ ?
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ