ಭದ್ರಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕು ಬಿಜೆಪಿ ಮಂಡಲ ಕಾರ್ಯದರ್ಶಿ ಕವಿತಾ ಸುರೇಶ್(40) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.
ಪತಿ ಛಾಯಾಗ್ರಾಹಕ ಸುರೇಶ್ ಹಾಗೂ ಒಂದು ಗಂಡು, ಒಂದು ಹೆಣ್ಣು ಮಕ್ಕಳು ಇದ್ದರು.ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದ ಕವಿತಾರವರನ್ನು ಶಿವಮೊಗ್ಗ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಗರದ ಬಿ.ಎಚ್ ರಸ್ತೆ ಪದ್ಮನಿಲಯ ಹೋಟೆಲ್ ಬಳಿ ವಾಸವಾಗಿದ್ದರು. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು, ಸ್ನೇಹ ಮಿಲನ ಮಹಿಳಾ ಸಂಘಟನೆ ಅಧ್ಯಕ್ಷರಾಗಿದ್ದರು. ಅಲ್ಲದೆ ವಿವಿಧ ಸಂಘಟನೆಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.
ಕವಿತಾ ಸುರೇಶ್ ರವರ ನಿಧನಕ್ಕೆ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ ಕೆ ಸಂಗಮೇಶ್ವರ್, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಜಿ. ಸುರೇಶಯ್ಯ, ಮಹಾಸಭಾದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಬಿಜೆಪಿ ಮಂಡಲ, ತಾಲ್ಲೂಕು ಛಾಯಾಗ್ರಾಹಕರ ಸಂಘ, ವಿವಿಧ ಮಹಿಳಾ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
ಮೃತರ ಅಂತ್ಯ ಸಂಸ್ಕಾರವು ಭದ್ರಾವತಿ ಹೊಳೆಹೊನ್ನೂರು ರಸ್ತೆಯ ವೀರಶೈವ ರುದ್ರಭೂಮಿಯಲ್ಲಿ ಸಂಜೆ ನಾಲ್ಕು ಗಂಟೆಗೆ ನೆರವೇರಲಿದೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.