ಸ್ತೀ ಶಕ್ತಿ ಯೋಜನೆಗೆ ಸಚಿವ ಪ್ರಿಯಾಂಕ್ ಖರ್ಗೆಯಿಂದ ಚಾಲನೆ
ಕಲಬುರಗಿ:ರಾಜ್ಯ ಸರ್ಕಾರ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಗೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.
ಕಲಬುರಗಿ ನಗರದಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಶಕ್ತಿ ಯೋಜನೆಗೆ ನೀಡಿ ಸಚಿವರು ಚಾಲನೆಯನ್ನು ನೀಡಿ ಅಲ್ಲಿನ ಮಹಿಳೆಯರಿಗೆ ಟಿಕೆಟ್ ಅನ್ನು ಕೂಡಾ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನ ಹಾಕಿಕೊಳ್ಳುತ್ತಿದೆ.ಮೊದಲ ಪ್ರಯತ್ನವಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ ರಾಜ್ಯದ 14.50 ಕೋಟಿ ಹಾಗೂ ಜಿಲ್ಲೆಯ 1.50 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ, ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ,ಎಸ್.ಪಿ ಇಶಾ ಪಂತ್ ಸೇರಿದಂತೆ ಇನ್ನಿತರರು ಇದ್ದರು.
ವರದಿ-ಅಪ್ಪಾರಾಯ ಬಡಿಗೇರ