ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಂತರರಾಷ್ಟ್ರೀಯ ರಕ್ತದಾನಿಗಳ ಅಂಗವಾಗಿ ಜಾಥಾ

ಚಾಮರಾಜನಗರ(ಕಾಮಗೆರೆ):ಯಾರಿರಲಿ, ಎಂತಿರಲಿ ಎಲ್ಲರ ದೇಹದಲ್ಲೂ ಇರುವ ರಕ್ತ ಒಂದೇ ಅಲ್ಲವೇ? ಹೌದು, ಜಗತ್ತಿನೆಲ್ಲೆಡೆ ಪ್ರತಿ ಕ್ಷಣ ಲೆಕ್ಕವಿಲ್ಲದಷ್ಟು ಮಂದಿ ರಕ್ತದ ಅಗತ್ಯದಲ್ಲಿರುತ್ತಾರೆ,ಸಾವಿರಾರು ಮಂದಿ ತಮಗೆ ಬೇಕಾದವರಿಗೆ ಬೇಕಿರುವ ರಕ್ತವನ್ನು ಹುಡುಕಿಕೊಂಡು ಆತಂಕದಿಂದ ಅಲೆಯುತ್ತಿರುತ್ತಾರೆ.ರಕ್ತ ಅಕ್ಷರಶಃ ಜೀವದ್ರವ್ಯ.ಈ ಹಿನ್ನೆಲೆಯಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತದೆ.ಪ್ರತಿ ವರ್ಷವೂ ಒಂದೊಂದು ಥೀಮ್ ಇಟ್ಟುಕೊಂಡು ಆಚರಿಸಲಾಗುತ್ತದೆ. ಈ ಬಾರಿ ‘ಇತರರಿಗಾಗಿ ಬದುಕಿ,ರಕ್ತ ನೀಡಿ, ಜೀವವನ್ನೇ ಹಂಚಿಕೊಳ್ಳಿ’ ಎಂಬ ಸಂದೇಶದೊಂದಿಗೆ ಆಚರಿಸಲಾಗುತ್ತಿದೆ. ಅಪಘಾತ, ಕ್ಯಾನ್ಸರ್, ಹೃದಯಸಂಬಂಧಿ ಸಮಸ್ಯೆಗಳು, ಹೆರಿಗೆ ಸಂಬಂಧಿ ಚಿಕಿತ್ಸೆಯ ವೇಳೆ ವ್ಯಾಪಕವಾಗಿ ರಕ್ತ ಬೇಕಾಗುತ್ತದೆ. ಆದರೆ, ಭಾರತವೂ ಸೇರಿದಂತೆ ಇಡೀ ವಿಶ್ವದಾದ್ಯಂತ ಬೇಡಿಕೆಗೆ ತಕ್ಕಂತೆ ರಕ್ತದ ಪೂರೈಕೆಯಿಲ್ಲ.ಹೀಗಾಗಿ ಬದುಕುವ ಎಲ್ಲ ಅವಕಾಶಗಳಿದ್ದರೂ ಎಷ್ಟೋ ಜೀವಗಳು ರಕ್ತದ ಕೊರತೆಯಿಂದಾಗಿ ಆಸ್ಪತ್ರೆಗಳಲ್ಲಿಅಸು ನೀಗಿವೆ.ಈ ಹಿನ್ನೆಲೆಯಲ್ಲಿವಿಶ್ವದ ಬಹುತೇಕ ರಾಷ್ಟ್ರಗಳ ಸರಕಾರಗಳು, ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿವೆ. ರಕ್ತದಾನ ಮಾಡಲು ದುಡ್ಡು ಬೇಕಾ ಅದಕ್ಕೆ ಬೇಕಾಗಿರುವುದು ಒಂದು ಜೀವಕ್ಕೆ ಮಿಡಿಯುವ ದೊಡ್ಡ ಮನಸ್ಸಷ್ಟೆ.
ಅಂತಾರಾಷ್ಟ್ರೀಯ ರಕ್ತದಾನ ದಿನದಂದು ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಹೋಲಿಕ್ರಾಸ್ ಆಸ್ಪತ್ರೆ ವೈದ್ಯರು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಂದ ಕಾಮಗೆರೆ ಗ್ರಾಮದಲ್ಲಿ ಕೊಳ್ಳೇಗಾಲ-ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಅಂತಾರಾಷ್ಟ್ರೀಯ ರಕ್ತದಾನ ದಿನಾಚರಣೆಯ ಅಂಗವಾಗಿ ಕೊಂಗರಹಳ್ಳಿಯ ತನಕ ರಕ್ತದಾನದ ಪ್ರಾಮುಖ್ಯತೆ ಸಾರುವ ಪೋಸ್ಟರ್ ಗಳನ್ನು ಹಿಡಿದು ಅರಿವಿನ ಜಾಥಾ ಮಾಡಲಾಯಿತು. ನಂತರ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ವಿವಿಧ ಗ್ರಾಮದ ದಾನಿಗಳು ಪಾಲ್ಗೊಂಡು ರಕ್ತದಾನ ಮಾಡಿದರು.ಇನ್ನು ಈ ಸಂದರ್ಭದಲ್ಲಿ ಹೋಲಿ ಕ್ರಾಸ್ ಆಸ್ಪತ್ರೆ ಆಡಳಿತ ಅಧಿಕಾರಿ ಡಾ ಡೆಲಿನ್ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ನೌಕರರು ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ