ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸ್ ಡೋರ್ ಕಿತ್ತಿ ಕಂಡಕ್ಟರ್ ಕೈಗೆ ಕೊಟ್ಟು ಶಕ್ತಿ ತೋರಿದ ನಾರಿಯರು

ಉಚಿತ ಪ್ರಯಾಣಕ್ಕಾಗಿ ಬಸ್ ಡೋರ್ ಕಿತ್ತಿ ಕಂಡಕ್ಟರ್ ಕೈಗೆ ಕೊಟ್ರು:ಶಕ್ತಿ ತೋರಿದ ನಾರಿಯರು

ಮೈಸೂರು:ಕಾಂಗ್ರೆಸ್​ನ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸುವ ‘ಶಕ್ತಿ ಯೋಜನೆ’ಜಾರಿಗೆ ಬಂದು ಒಂದು ವಾರ ಕಳೆಯುವಷ್ಟರಲ್ಲಿ ನಾನಾ ಅವಾಂತರಗಳು ನಡೆದುಹೋಗಿವೆ.
ಈಗಾಗಲೇ ಬಸ್​ನಲ್ಲಿ ಮಹಿಳೆಯರು ಉಚಿತ ಪ್ರಯಾಣಕ್ಕಾಗಿ ಧಾವಿಸುತ್ತಿದ್ದು, ನಿರ್ವಾಹಕರು ಉಳಿದವರಿಗೆ ಟಿಕೆಟ್ ನೀಡಲಿಕ್ಕೂ ಪರದಾಡಬೇಕಾದಂಥ ಘಟನೆಗಳೂ ಜರುಗಿವೆ ಪುರುಷರು ಟಿಕೆಟ್​ಗೆ ದುಡ್ಡು ಕೊಟ್ಟೂ ನಿಂತುಕೊಂಡೇ ಪ್ರಯಾಣಿಸಬೇಕಾದ ಪರಿಸ್ಥಿತಿ,ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಂದ ಸೀಟ್​ಗಾಗಿ ಕಿತ್ತಾಟ ಮುಂತಾದವು ಕೂಡ ನಡೆದಿವೆ.
ಇದೀಗ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಪ್ರಯೋಜನ ಪಡೆಯಲು ಮಹಿಳೆಯರು ಪ್ರಯೋಗಿಸಿದ ಶಕ್ತಿಗೆ ಬಸ್​ ಡೋರ್ ಕಿತ್ತು ಹೋದ ಪ್ರಕರಣವೂ ನಡೆದಿದೆ. ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆಯೆಂದು ತಿಳಿದು ಬಂದಿದೆ. ವಾರಾಂತ್ಯ ಹಾಗೂ ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಹಿಳೆಯರು ತೋರಿದ ಶಕ್ತಿಗೆ ಬಸ್​ವೊಂದರ ಬಾಗಿಲು ಕಳಚಿ ಹೋಗಿದೆ.

ವರದಿ-ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ