ಭದ್ರಾವತಿ:2023ರ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಭದ್ರಾವತಿ ಕ್ಷೇತ್ರದ ಶಾಸಕರಾಗಿ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಶಾಸಕ ಬಿ ಕೆ ಸಂಗಮೇಶ್ವರ್ ರವರಿಗೆ ಸ್ಥಳೀಯ ನಗರಸಭೆ ವತಿಯಿಂದ ಪೌರಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 3-7-2023 ರಂದು ಸೋಮವಾರ ಮಧ್ಯಾಹ್ನ 1-30ಕ್ಕೆ ನಗರದ ತರೀಕೆರೆ ರಸ್ತೆಯಲ್ಲಿರುವ ನಗರಸಭಾ ಕಚೇರಿ ಆವರಣದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ರವರಿಗೆ ಪೌರಸನ್ಮಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಪೌರಾಯುಕ್ತ ಎಂ.ಮನುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
