ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಮರ ಶ್ರೀ ಆಲದ ಮರದ ಹತ್ತಿರ ವನಸಿರಿ ಫೌಂಡೇಶನ್ ವತಿಯಿಂದ ಪರಿಸರ ಪ್ರೇಮಿ,ಸಮಾಜ ಸೇವಕರಾದ ಗಣೇಶ ಪತ್ತಾರ ಸುಕಾಲಪೇಟೆ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿ ನೆಟ್ಟು ನೀರುಣಿಸುವ ಮೂಲಕ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕರು ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ ಅವರು ಮಾತನಾಡಿ ಪ್ರತಿಯೊಬ್ಬರೂ ಸಸಿ ನೆಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಬೇಕು,ತುಂಬಾ ಹಣ ಖರ್ಚುಮಾಡಿ ಆಡಂಬರದಿಂದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದಕ್ಕಿಂತ ಒಂದೊಂದು ಸಸಿ ನೆಟ್ಟು ಆಚರಿಸಿಕೊಂಡರೆ ಈ ಪರಿಸರಕ್ಕೆ ನಮ್ಮದೇ ಆದ ಕೊಡುಗೆ ನೀಡಿದಂತಾಗುತ್ತದೆ ಇತ್ತೀಚೆಗೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ ಇದರಿಂದ ಹೆಚ್ಚು ವಾಯು ಮಾಲಿನ್ಯ ಉಂಟಾಗುತ್ತಿದೆ ಅದನ್ನು ತಡೆಗಟ್ಟಲು ನಾವುಗಳೆಲ್ಲರೂ ಪರಿಸರವನ್ನು ಉಳಿಸಿ ಬೆಳಸಬೇಕಾಗಿದೆ ಹೆಚ್ಚು ಹೆಚ್ಚು ಗಿಡಮರಗಳನ್ನು ನೆಟ್ಟು ಪೋಷಣೆ ಮಾಡಿದರೆ ವಾಯುಮಾಲಿನ್ಯವನ್ನು ತಡೆಗಟ್ಟಬಹುದು ಇದಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಮತ್ತು ಇಂತಹ ಕಾರ್ಯಕ್ಕೆ ಸುಕಾಲಪೇಟೆಯ ಗಣೇಶ ಪತ್ತಾರ ಅವರು ಕೈಜೋಡಿಸಿರುವುದು ಸ್ವಾಗತ ಅವರ ಹುಟ್ಟು ಹಬ್ಬವನ್ನು ಸಸಿ ನೆಡುವ ಮೂಲಕ ಆಚರಿಸಿಕೊಂಡು ಎಲ್ಲ ಪರಿಸರ ಪ್ರೇಮಿಗಳಿಗೆ ಮಾದರಿಯಾಗಿದ್ದಾರೆ ಅವರಿಗೆ ವನಸಿರಿ ಫೌಂಡೇಶನ್ ವತಿಯಿಂದ ಶುಭಾಶಯಗಳನ್ನು ಕೋರಿ ಧನ್ಯವಾದಗಳನ್ನು ಸಲ್ಲಿಸಲು ಬಯಸುತ್ತೇನೆ ಪ್ರತಿಯೊಬ್ಬರೂ ತಮ್ಮ ಹುಟ್ಟು ಹಬ್ಬವನ್ನು ಸಸಿನೆಡುವ ಮೂಲಕ ಆಚರಿಸಿಕೊಳ್ಳಬೇಕು ಎಂದು ಪರಿಸರ ಪ್ರೇಮಿಗಳಿಗೆ ಕರೆ ನೀಡಿದರು.ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕರು,ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು ಅಮರೇಗೌಡ ಮಲ್ಲಾಪೂರ,ಗಣೇಶ ಪತ್ತಾರ ಸುಕಾಲಪೇಟೆ,ವನಸಿರಿ ಫೌಂಡೇಶನ್ ಸಹ ಕಾರ್ಯದರ್ಶಿ ರಂಜಾನ್ ಸಾಬ್ ಲೋಹಾರ್,ಅಮರಯ್ಯ ಸ್ವಾಮಿ,ಮಸ್ಕಿ ತಾಲೂಕ ಅಧ್ಯಕ್ಷ ರಾಜು ಬಳಗಾನೂರ,ವೆಂಕಟರಡ್ಡಿ ಹೆಡಗಿನಾಳ, ಉಪೇಂದ್ರ ಆಚಾರಿ,ಮೌನೇಶ ಬಡಿಗೇರ,ಶ್ರೀಧರ ಆಚಾರಿ ಇನ್ನಿತರರು ಭಾಗಿಯಾಗಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.