ಕಲಬುರಗಿ:ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಯಂ ವೈದ್ಯರು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಖಾಸಗಿ ಕ್ಲಿನಿಕ್‌ಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರಿಂದ ಹಣ ಲೂಟಿ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕೆಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷ ಚನ್ನಯ್ಯ ವಸ್ತ್ರದ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಗೆ ಪತ್ರ ಬರೆದಿರುವ ಚನ್ನಯ್ಯ ವಸ್ತ್ರದ ಸಾರ್ವಜನಿಕರ ತೆರಿಗೆ ಹಣದಿಂದ ಲಕ್ಷಾಂತರ ರೂಪಾಯಿ ಸಂಬಳ ಪಡೆಯುತ್ತಿರುವ ಸರ್ಕಾರಿ ಕಾಯಂ ವೈದ್ಯರು ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರ ಸೀಮಿತ ಮಾಡದೆ ಸೇವೆ ಬದಲಿಗೆ ಹಣ ಗಳಿಕೆಗಾಗಿ ಖಾಸಗಿ ಕ್ಲಿನಿಕ್ ಮತ್ತು ನರ್ಸಿಂಗ್ ಹೋಮ್ ಗಳಲ್ಲಿ ಕೆಲಸಗಳಿಗೆ ಅನುಮತಿ ನೀಡುವ ಮೂಲಕ ದೇವರಂತೆ ಕಾಣುವ ವೈದ್ಯರನ್ನು ಹಣದ ವ್ಯಾಮೋಹಕ್ಕೆ ಆಸೆಪಡಿಸಿ ಸಾರ್ವಜನಿಕರನ್ನು ಹಣಕ್ಕಾಗಿ ಆರೋಗ್ಯ ಪ್ರಾಣವನ್ನು ಬಲಿಪಡುವಂತಹ
ಆಗಬಾರದು.ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಖಾಸಗಿ ಕ್ಲಿನಿಕ್ ನಡೆಸಲು ನೀಡಿರುವ ಅನುಮತಿ ಸರ್ಕಾರಿ ಆಸ್ಪತ್ರೆಗಳು ಖಾಸಗಿ ಕ್ಲಿನಿಕ್ ಮತ್ತು ನರ್ಸಿಂಗ್ ಹೋಂಗಳಿಗೆ ಟೋಕನ್ ನಂತಾಗಿದೆ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಕೇವಲ ಬಡವರು ಮತ್ತು ಮಧ್ಯಮ ವರ್ಗದವರೇ ಆಗಿದ್ದು ವೈದ್ಯರ ಹಾಜರಾತಿ ಇಲ್ಲದೆ ಸರಿಯಾದ ಸಮಯಕ್ಕೆ ಚಿಕಿತ್ಸೆಯೂ ಸಿಗದೇ ರೋಗಿಗಳು ಹೆಣವಾಗುತ್ತಿರುವುದು ರಾಜ್ಯದಲ್ಲಿ ನಡೆಯುತ್ತಿದೆ ಈ ಎಲ್ಲಾ ಕಾರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸರ್ಕಾರಿ ಸಂಬಳ ಪಡೆಯುತ್ತಿರುವ ಖಾಯಂ ವೈದ್ಯರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರ ಸೇವೆಗೆ ಮಾತ್ರ ಸೀಮಿತವಾಗಿರಬೇಕೆಂದು ಹಾರಿಸ್ ಸರ್ಕಾರಕ್ಕೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಸರ್ಕಾರ ಇದಕ್ಕೆ ಸ್ಪಂದಿಸುವ ವಿಶ್ವಾವಾಸವನ್ನು ವ್ಯಕ್ತಪಡಿಸಿದ, ಚನ್ನಯ್ಯ ವಸ್ತ್ರದ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆಯ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.