ಯಾದಗಿರಿ: ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ವತಿಯಿಂದ ಯಾದಗಿರಿ ಆದರ್ಶ ಶಾಲೆಯಲ್ಲಿ ಕಾನೂನು ಅರಿವು – ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮ ಉದ್ಘಾಟಕರಾದ ಮುಖ್ಯ ಗುರುಗಳಾದ ಶ್ರೀಮತಿ ಮಂಜುಳಾ ಅವರು ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ತಿದ್ದುಪಡಿ ಕಾಯ್ದೆ 2016 ರ ಕುರಿತು ತಂದೆ ತಾಯಂದಿರಿಗೆ ಕಾನೂನು ಬಗ್ಗೆ ಅರಿವು ಮೂಡಿಸಿದರು.
ಮಕ್ಕಳಿಗೆ ಶಾಲೆ ಬಿಡಿಸಿ ಕೆಲಸಕ್ಕೆ ಕಳಿಸುವುದು ಅಪರಾಧ, ತಂದೆ ತಾಯಂದಿರು ಮಕ್ಕಳಿಗೆ ಶಾಲೆಗೆ ಕಳುಹಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಮುಂದಿನ ದಿನಗಳಲ್ಲಿ ದೇಶದ ಉತ್ತಮ ಪ್ರಜೆಯಾಗಿ ಮಾಡಬೇಕು ಎಂದು ಹೇಳಿದರು.
ಕಾನೂನು ಅರಿವು – ನೆರವು ಕಾರ್ಯಕ್ರಮ ಮಾಡುವುದರಿಂದ ಮತ್ತು ಶಾಲೆಯ ಮಕ್ಕಳಿಗೆ ಕಾನೂನು ಅರಿವು ಮೂಡಿಸುವುದರಿಂದ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳು ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ಮಾತನಾಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳಿಗೆ ಕೆಲಸಕ್ಕೆ ಇಟ್ಟು ಕೊಳ್ಳುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಮಕ್ಕಳಿಗೆ ಕೆಲಸಕ್ಕೆ ನೇಮಿಸಿಕೊಳ್ಳವವರ ವಿರುದ್ಧ ನಮ್ಮ ದೇಶದ ಕಾನೂನು ಪ್ರಕಾರ 6 ತಿಂಗಳಿಂದ 2 ವರ್ಷ ಶಿಕ್ಷೆ ಹಾಗೂ ರೂ 20.000 ರಿಂದ ರೂ 50.000 ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿವಶರಣಪ್ಪ, ಶ್ರೀಮತಿ ರೇಣುಕಾ, ಲಕ್ಷ್ಮಿ ನಾರಾಯಣ, ಶಿಕ್ಷಕರಾದ ಭಗವಂತ, ಮಹೇಶ್ ಶಾಲೆಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ