ಜೇವರ್ಗಿ:ಕಲ್ಬುರ್ಗಿ ಜಿಲ್ಲೆ ಬರಪಿಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಜೇವರ್ಗಿ ತಾಲೂಕಿನ ಆರ್ಟಿಐ ಹೋರಾಟಗಾರ ಪರಶುರಾಮ ದಂಡಗುಲ್ಕರ ಬಿಳವಾರ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹಲವು ಜಿಲ್ಲೆಗಳಲ್ಲಿ ರೈತರು ಕಂಗಲಾಗಿದ್ದಾರೆ ಈ ನಿಟ್ಟಿನಲ್ಲಿ ಮಳೆಯ ಅಭಾವದಿಂದ ಕಳೆಗುಂದಿರುವ ಕಲ್ಬುರ್ಗಿ ಜಿಲ್ಲೆಯನ್ನು ಬರಪಿಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಜೇವರ್ಗಿ ತಾಲೂಕಿನ ಶಾಸಕರು ಸದನದಲ್ಲಿ ರೈತರ ಪರವಾಗಿ ಧ್ವನಿ ಎತ್ತಬೇಕು ಕಲ್ಬುರ್ಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕು ಈಗಾಗಲೇ ರಾಜ್ಯದ ಹಲವೆಡೆ ಸಂಕಷ್ಟಕ್ಕೆ ಸಿಲುಕಿರುವ ರೈತರು ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಇದು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲವೇ ಈ ಭಾಗದ ರೈತರ ಬೆಳೆ ಸಾಲ ಮನ್ನಾ ಮಾಡುವಂತೆ ತಾಲೂಕಿನ ಶಾಸಕರು ಸರ್ಕಾರಕ್ಕೆ ಆಗ್ರಹಿಸಬೇಕು ಇದರಿಂದ ಬರಗಾಲದ ಬವಣೆಯಿಂದ ನರಳಿದ ರೈತರಿಗೆ ಅನುಕೂಲಕರವಾಗಲಿದೆ ಎಂದು ಜೇವರ್ಗಿ ತಾಲೂಕ ಆರ್ಟಿಐ ಹೋರಾಟಗಾರ ಪರಶುರಾಮ್ ದಂಡಗುಲ್ಕರ ಬಿಳವಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.