ಬೀದರ:ಔರಾದ ತಾಲ್ಲೂಕಿನ ಬಡ ಮಕ್ಕಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ವರದಾನವಾಗಿ ಪರಿಣಮಿಸಿದೆ ಇದರಿಂದ ಬಡ ಮಕ್ಕಳ ತಾಂತ್ರಿಕ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗುತ್ತೆ ಎಂದು ಮುಖಂಡ ರಾಮಶೆಟ್ಟಿ ಪನ್ನಾಳೆ ನುಡಿದರು.
ಮಂಗಳವಾರ ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಸುಜ್ಞಾನ ನಿಧಿ ವಿದ್ಯಾರ್ಥಿವೇತನ ಮಂಜೂರಾತಿ ಪತ್ರ ನೀಡುವ ಕಾರ್ಯಕ್ರಮ ಜ್ಯೋತಿ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಪ್ರವೀಣರವರು ಎಸ್ಕೆಡಿ ಆರ್ಡಿಸಿ ಯೋಜನೆಯಿಂದ ಅನೇಕ ಮಕ್ಕಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಲಾಭದಾಯಕವಾಗಿದೆ ಯೋಜನೆಯಲ್ಲಿನ ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ಇದರ ಸದುಪಯೋಗವಾಗುತ್ತದೆ.
2016ರಿಂದ ಯೋಜನೆಯಿಂದ
ಹಲವಾರು ರೀತಿಯ ಜನಪರ ಕಾರ್ಯಕ್ರಮಗಳು ಜನರ ಮನೆ ಬಾಗಿಲಿಗೆ ತಲುಪಿವೆ ಅನೇಕ ಪರಿವಾರಗಳು ಇಂದು ಉತ್ತಮ ಬದುಕು ಸಾಗಿಸಲು ಈ ಯೋಜನೆ ನೆರವಾಗದೆ ಶಿಷ್ಯವೇತನ ಯಾವುದೇ ಕಾರಣಕ್ಕೂ ದುರ್ಬಳಕೆ ಆಗದಂತೆ ಮಕ್ಕಳು ಯೋಜನೆಯ ಸದುಪಯೋಗ ಪಡೆದುಕೊಂಡು
ಉತ್ತಮ ರೀತಿಯಿಂದ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳಬೇಕೆಂದು ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಪ್ರವೀಣ ತಿಳಿಸಿದರು.
ಈ ಸಂದರ್ಭದಲ್ಲಿ ಯೋಜನೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಪ್ರವೀಣ,ಕಸಾಪ ತಾಲೂಕ ಅಧ್ಯಕ್ಷ ಶಾಲಿವಾನ ಉದಗೀರೆ 50 ಜನ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿವೇತನ ಮಂಜೂರಾತಿ ಪತ್ರ ನೀಡಿದರು.ಕಾರ್ಯಕ್ರಮದಲ್ಲಿ ರಾಘವೇಂದ್ರ ಗೌಡ, ಮಲ್ಲಪ್ಪ ಗೌಡಾ,ಲೋಕೇಶ ಭಾಲ್ಕೆ ಇದ್ದರು.
ವರದಿ:ಅಮರ ಮುಕ್ತೆದಾರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.