ಹನೂರು:ನಮ್ಮ ತಾಲ್ಲೂಕಿನ ಸೋಲಿಗ ಮಹಿಳೆ ಜೀರಿಗೆ ಗದ್ದೆ ಗ್ರಾಮದ ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಿಂಗನಲ್ಲೂರು ಗ್ರಾಮದ ಮೊಮ್ಮಗ ಪ್ರಖ್ಯಾತ ಚಿತ್ರನಟ, ಮಾನವತವಾದಿ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಆರ್ ನರೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯು ಆಯೋಜಿಸಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪೌರಕಾರ್ಮಿಕ ಮಹಿಳೆಯನ್ನು ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿರುವುದು ಕೂಡ ಅಭಿನಂದನೆಯ ವಿಚಾರ. ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಶಾಸ್ತ್ರೀಯ ಸ್ಥಾನಮಾನವೂ ಕೂಡ ಸಿಕ್ಕಿದೆ. ಶಾಸ್ತ್ರೀಯ ಸ್ಥಾನಮಾನವನ್ನು ನೀಡಿರುವ ಕನ್ನಡ ಭಾಷೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಅನುದಾನವನ್ನು ನೀಡಬೇಕಾಗಿದೆ. ಅನುಷ್ಠಾನವಾಗಿರುವುದು ಬಿಟ್ಟರೆ ಭಾಷೆ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಆದರೆ ಕರ್ನಾಟಕ ವಿಚಾರದಲ್ಲಿ ಭಾಷಾ ತಾರತಮ್ಯವನ್ನು ಮಾಡಲಾಗುತ್ತಿದೆ. ಇದರಿಂದ ಕರ್ನಾಟಕದ ಉದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ.
ಇತರೆ ರಾಜ್ಯಗಳಿಗೆ ಹೋಲಿಸಿದರೆ ಕನ್ನಡಿಗರೇ ಕನ್ನಡವನ್ನು ನಿರ್ಲಕ್ಷಿಸುತ್ತಿದ್ದಾರೆ. ಆಗಾಗಬಾರದು ಶಾಲೆಗಳಲ್ಲಿ ಇಂಗ್ಲೀಷ್ ವ್ಯಾಮೋಹ ಹೆಚ್ಚುತ್ತಿದೆ. ಬೆಂಗಳೂರು ಕೆಲವಡೆ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸುತ್ತಿದ್ದಾರೆ ಇದು ವಿಷಾನಿಯ ಎಂದು ನುಡಿದ ಅವರು ತಾಲೂಕಿನ ಕಾಡಂಚಿನ ಗ್ರಾಮಗಳಾದ ಗೋಪಿನಾಥಮ್, ತೋಮಿಯರ್ ಪಾಳ್ಯ ಇನ್ನಿತರಡೆ ತಮಿಳು ಭಾಷಿಕರ ಪ್ರಭಾವಿರುವ ಗ್ರಾಮಗಳಲ್ಲೂ ಕೂಡ ವಿದ್ಯಾರ್ಥಿಗಳು ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿರುವುದು ಮೆಚ್ಚುಗೆಯ ಸಂಗತಿ ಎಂದರು.
ವರದಿ-ಉಸ್ಮಾನ್ ಖಾನ್ ಬಂಡಳ್ಳಿ.