ಭದ್ರಾವತಿ:ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಯೋರ್ವರಿಗೆ ಭದ್ರಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಭದ್ರಾವತಿ ನಗರದ ಜನ್ನಾಪುರ ಬಡಾವಣೆ ನಿವಾಸಿ ಶ್ರೀಕಾಂತ್ (45) ಎಂಬುವರೆ,16 ವರ್ಷ ವಯೋಮಾನದ ಪುತ್ರನಿಗೆ ಬೈಕ್ ಚಾಲನೆಗೆ ಅವಕಾಶ ನೀಡಿ ದಂಡ ಹಾಕಿಸಿಕೊಂಡ ತಂದೆ.
ಜುಲೈ 19 ರಂದು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಹುತ್ತಾ ಕಾಲೋನಿ ಬಳಿ ಪಿ ಎಸ್ ಐ ರಮೇಶ್ ರವರು ವಾಹನಗಳ ತಪಾಸಣಾ ಕಾರ್ಯ ನಡೆಸುತ್ತಿದ್ದರು ಈ ವೇಳೆ ಬಾಲಕನೋರ್ವ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದು,ಆತನನ್ನು ನಿಲ್ಲಿಸಿ ವಾಹನಗಳ ದಾಖಲಾತಿ ಪರಿಶೀಲಿಸಿದ್ದರು ಆತನ ಬಳಿ ವಾಹನ ಚಾಲನಾ ಪರವಾನಿಗೆಯಿಲ್ಲದಿರುವುದು ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕನಾಗಿರುವುದು ಬೆಳಕಿಗೆ ಬಂದಿತ್ತು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿ,ಅಪ್ರಾಪ್ತ ಪುತ್ರನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ತಂದೆಯ ವಿರುದ್ದ ನ್ಯೂ ಟೌನ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿದ ನಂತರ,ಪ್ರಕರಣದ ಕುರಿತಂತೆ ನ್ಯೂ ಟೌನ್ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು ಪ್ರಕರಣವನ್ನು ಗಮನಿಸಿದ ನ್ಯಾಯಾಧೀಶರು ಜನ್ನಾಪುರ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಅಪ್ರಾಪ್ತ ಪುತ್ರನಿಗೆ ಬೈಕ್ ಚಾಲನೆಗೆ ಅವಕಾಶ ನೀಡಿದ್ದ ತಪ್ಪಿಗೆ 25 ಸಾವಿರ ರೂ.ದಂಡ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.
