ಕರ್ನಾಟಕದಲ್ಲಿ ಕೆಲವು ದಿನಗಳಿಂದ ಹವಾಮಾನರ ಏರು ಪೇರು ಆಗುವುದರಿಂದ ಜನ ಜೀವನದ ವ್ಯತ್ಯಾಸದಿಂದ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದ್ದು ಕೆಲವು ಜನ ಸಾಮಾನ್ಯರಲ್ಲಿ ಕಣ್ಣಿನ ಉರಿ ಕಂಡು ಬಂದು ಕೆಳಕಂಡಂತೆ ಉಪಯುಕ್ತ ಮಾಹಿತಿಯನ್ನು ಸಂಬಂಧಪಟ್ಟ ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಅದರಲ್ಲಿ ಕಣ್ಣಿನ ಉರಿ ಊತದ ರೋಗಿಗಳಿಗೆ ವೈದ್ಯರು ನೋವು ನಿವಾರಕ ಮಾತ್ರೆ ಮತ್ತು ಕಣ್ಣಿನ ಡ್ರಾಪ್ಸ್ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ವೈದ್ಯರು ಹೇಳುತ್ತಿದ್ದಾರೆ.
ಅದರಲ್ಲಿ ಮೂಗಿನ ಮತ್ತು ಗಂಟಲಿನ ಸೋಂಕಿನ ಸಮಸ್ಯೆ ಹೆಚ್ಚಾಗುತ್ತಿದ್ದು. ಅದಕ್ಕೆ ಬೇಕಾದ ಚಿಕಿತ್ಸೆ ನೀಡುವುದು. ಶಸ್ತ ಚಿಕಿತ್ಸೆ ಒಳಪಟ್ಟಿರುವ ರೋಗಿಗಳು ಮತ್ತು ಕಣ್ಣಿನ ಉರಿ ಊತ ಇರುವ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಂಧತ್ವ ನಿಯಂತ್ರಣ ವಿಭಾಗ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರ ಇರುವ ಸಾರ್ವಜನಿಕ ಸರ್ಕಾರಿ ಬೇಟಿ ನೀಡಿ ವೈದ್ಯರು ಸಲಹೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ವರದಿ ರಾಜಶೇಖರ ಮಾಲಿ ಪಾಟೀಲ್