ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ತಾಲೂಕ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆ ವಿಪತ್ತು ನಿರ್ವಹಣೆ ಮಾಡಿ ಸಂಘಟಿತರಾಗಿ ಕೆಲಸ ಮಾಡೋಣ ದಂಡಾಧಿಕಾರಿ:ಉಮಾಕಾಂತ ಹಳ್ಳೆ

ಯಾದಗಿರಿ/ಶಹಾಪುರ:ಕಳೆದ ಒಂದು ವಾರದಿಂದ ಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸುವ ಪ್ರಕೃತಿ ವಿಪತ್ತುಗಳನ್ನು ಎದುರಿಸಲು ತಾಲೂಕ ಇಲಾಖೆ ಅಧಿಕಾರಿಗಳ ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ತಾಲೂಕ ದಂಡಾಧಿಕಾರಿ ಉಮಾಕಾಂತ ಹಳ್ಳೆ ಅವರು ತಿಳಿಸಿದರು.
ತಾಲೂಕ ಆಡಳಿತ ಹಾಗೂ ತಾಲೂಕ ಪಂಚಾಯತ ಇವರ ಸಹಯೋಗದೊಂದಿಗೆ ಜು.26 ರಂದು ಶಹಾಪುರ ತಾಲೂಕ ಪಂಚಾಯತ ಸಭಾಂಗಣದಲ್ಲಿ ನಡೆದ ತಾಲೂಕ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುತ್ತದೆ, ಜಿಲ್ಲೆಯನ್ನು ರೆಡ್ ಜೂನ್ ಗುರುತಿಸಿದ್ದು,ಮಳೆಯಿಂದ ಸಂಭವಿಸುವ ಪ್ರಕೃತಿ ವಿಪತ್ತುಗಳನ್ನು ಎದುರಿಸಲು ತಾಲೂಕ ಆಡಳಿತ ಮಂಡಳಿ ಅಧಿಕಾರಿಗಳು ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು,ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕಾಗಿದೆ ನಗರ ಮತ್ತು ಗ್ರಾಮೀಣ ಪ್ರದೇಶದ ಜನ, ಜಾನುವಾರುಗಳ ಜೀವ ಹಾನಿ‌ಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎನ್.ಡಿ.ಆರ್.ಎಫ್ ನಿಯಮದ ಪ್ರಕಾರ ಜನ- ಜಾನುವಾರುಗಳು ಮನೆ ಹಾಗೂ ಬೆಳೆ ಹಾನಿ ಸಂಬಂಧಿಸಿದಂತೆ ಸಂತ್ರಸ್ತರಿಗೆ ಹಾನಿ ಸಂಭವಿಸಿದರೆ 24 ಗಂಟೆಗಳಲ್ಲಿ ಸೂಕ್ತ ಪರಿಹಾರ ವಿತರಣೆ ಮಾಡಬೇಕಿದೆ. ಸಂಭವಿಸಿದ ಹಾನಿಯ ಕುರಿತು ಸಮೀಕ್ಷೆ ಮಾಡಲು ತಂಡ ರಚನೆ ಮಾಡಲಾಗಿದೆ,ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜಂಟಿ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿಳಂಬ ಮಾಡದೆ ಕಾಲಮಿತಿಯಲ್ಲಿ ಸಂಪೂರ್ಣವಾದ ವರದಿ ನೀಡಿದರೆ ಪರಿಹಾರ ವಿತರಣೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
150 ಸೆ.ಮೀಟರ್ ಮಳೆ ಸುರಿಯುವ ಸಾಧ್ಯ ಇದೆ ಹಿನ್ನೆಲೆ ತಾಲೂಕ ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು,ತಮ್ಮ ಮೇಲಾಧಿಕಾರಿಗಳ ಅನುಮತಿ ಇಲ್ಲದೆ,ಕೇಂದ್ರ ಸ್ಥಾನ ಬಿಡುವಂತಿಲ್ಲ ಹಾಗೂ ಅಧಿಕಾರಿಗಳು ತಮ್ಮದೂರವಾಣಿ ಸಂಖ್ಯೆಯನ್ನು ಸ್ಥಗಿತ ಗೊಳಿಸದೆ ಸಕ್ರಿಯವಾಗಿರಿಸಿ ಕೊಳ್ಳಬೇಕು ಎಂದು ಅವರು,ಗ್ರಾಮದಲ್ಲಿನ ಚರಂಡಿ, ನಾಲೆ ನೀರಗಳು ನಿಲ್ಲದಂತೆ ಮಳೆ ನೀರು ಸರಳವಾಗಿ ಹರಿದು ಹೋಗದಂತೆ ಸ್ವಚ್ಛಗೊಳಿಸಿ,ಕಲುಷಿತ ನೀರು ಕುಡಿಯುವ ನೀರಿನೊಂದಿಗೆ ಸೇರಿದಂತೆ ಮುಂಜಾಗ್ರತೆ ವಹಿಸಿ ಎಂದು ಹೇಳಿದರು.
ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ್ ಅವರು ಮಾತನಾಡಿ ಮಳೆಯಾಗುತ್ತಿರುವ ಕಾರಣದಿಂದ ತಾಲೂಕಿನಲ್ಲಿ ಹರಿದು ಹೋಗುವ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರು ನದಿಗಳಿಗೆ ಹರಿಬಿಡಲಾಗುತ್ತಿದ್ದು ನದಿ ದಂಡೆಗಳಲ್ಲಿ ಗ್ರಾಮದ ಜನರು ಹಾಗೂ ದನ ಕರುಗಳು ನದಿ ಹತ್ತಿರ ಹೋಗದಂತೆ ಗ್ರಾಮದಲ್ಲಿ ಡಂಗೂರ ಹೊಡಿಸಬೇಕು ಮತ್ತು ಗ್ರಾಮಸ್ಥರಿಗೆ ಜಾಗೃತಿ ಮೂಡಿಸಿ ಎಂದು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.
ನದಿಗಳ ಪ್ರವಾಹದಿಂದ ನದಿ ದಡದ ಹತ್ತಿರ ಹೋಗದಂತೆ ಹಾಗೂ ಮಳೆಯಿಂದಾಗಿ ಮನೆಗಳು ಬೀಳುವ ಸ್ಥಿತಿಯಲ್ಲಿದ್ದರೆ,ಅಂತಹ ಮನೆಯ ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲು ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಮತ್ತು ಗಂಜಿ ಕೇಂದ್ರಗಳ ಸ್ಥಳಗಳನ್ನು ಗುರುತಿಸಿ ಅಗತ್ಯ ಸೌಲಭ್ಯಗಳು ಒದಗಿಸಿ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ತೆಗ್ಗು-ಗುಂಡಿ ಹಾಗೂ ಚರಂಡಿಗಳಲ್ಲಿ ಮಳೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆಗಳು ಹೆಚ್ಚು ಆದಕಾರಣ ಜನರಿಗೆ ಹಾಗೂ ಧನ- ಕರುಗಳಿಗೆ ಕಚ್ಚುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಗ್ರಾಮಸ್ಥರು ಆರೋಗ್ಯದ ಹಿತದೃಷ್ಟಿಯಿಂದ ಆಟೋ ಪ್ರಚಾರದ ಮೂಲಕ ಗ್ರಾಮದ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ