ಸಿಂಧನೂರು ನಗರದ ಶಾರದಾ ಮಹಿಳಾ ಕಲಾ ಮತ್ತು ಪದವಿ ಮಹಾವಿದ್ಯಾಲಯದಲ್ಲಿ
ಶಾರದಾ ಮಹಿಳಾ ಶಿಕ್ಷಣ ಸಂಸ್ಥೆ (ರಿ.)ಸಿಂಧನೂರು ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅದ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರು ಮಾತನಾಡಿ ಪ್ರತಿಯೊಬ್ಬರೂ ಮನೆಗೊಂದು ಮರ ಊರಿಗೊಂದು ವನ ಎನ್ನುವಂತೆ ಪ್ರತಿಯೊಬ್ಬರೂ ಮನೆಗೊಂದು ಸಸಿ ನೆಟ್ಟು ಪಾಲನೆ ಪೋಷಣೆ ಮಾಡಬೇಕು ಅದನ್ನು ಅತ್ಯಂತ ಕಾಳಜಿಯಿಂದ ಬೆಳಸಿ ಹೆಮ್ಮರವಾಗುಂತೆ ಬೆಳಸಬೇಕು.ಪ್ರತಿಯೊಬ್ಬರೂ ಗಿಡಗಳನ್ನು ನೆಡುವ ಮೂಲಕ ಪರಿಸರವನ್ನು ಬೆಳಸಲು ಮುಂದಾಗಬೇಕು ಮತ್ತು ವಿಶ್ವ ಪರಿಸರ ದಿನಾಚರಣೆ ಕೇವಲ ಒಂದೇ ದಿನಕ್ಕೆ ಸೀಮತವಾಗದೇ ಪ್ರತಿದಿನವೂ ಕೂಡಾ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದಾಗ ಮಾತ್ರ ಮನೆಗೊಂದು ಮರ ಊರಿಗೊಂದು ವನ ಇದಕ್ಕೆ ಒಂದು ಅರ್ಥ ಬರುತ್ತದೆ. ಸಸಿ ನೆಡುವ ಕಾರ್ಯಕ್ರಮದಲ್ಲಿ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಯುವಕ ಯುವತಿಯರು,ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಭಾಗವಹಿಸಬೇಕು ಎಂದು ಯುಕರಿಗೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿನಿ ಮಾತನಾಡಿ ಸಿಂಧನೂರಿನ ಅಮರೇಗೌಡ ಮಲ್ಲಾಪೂರ ಅವರು ಪರಿಸರವೇ ತಮ್ಮ ಉಸಿರು ಎನ್ನುವಂತೆ ಕಡಿದು ಹಾಕಿದ ಆಲದ ಮರಕ್ಕೆ ಮರುಜೀವ ನೀಡಿ ಕಳೆದ ಒಂದುವರೆ ವರ್ಷದಿಂದ ತಾಯಿ ಮಗುವನ್ನು ಹೇಗೆ ಆರೈಕೆ ಮಾಡುತ್ತಾಳೋ ಅದೇರೀತಿ ಸಿಂಧನೂರಿನ ಆಲದ ಮರವನ್ನು ಆರೈಕೆ ಮಾಡುತ್ತಿದ್ದಾರೆ ಇವರ ಈ ಪರಿಸರ ಕಾಳಜಿ ಗುರುತಿಸಿ ಕರ್ನಾಟಕ ಸರ್ಕಾರ ಇದೇ ವರ್ಷ ಜೂನ್ 5ರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ ಇದು ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ ಇಂತಹ ಅಪರೂಪದ ಸಾಧಕರು ಇಂದು ನಮ್ಮ ಕಾಲೇಜಿಗೆ ಆಗಮಿಸಿರುವುದು ನಮಗೆ ಸಂತೋಷದ ವಿಷಯ ಅವರು ಹೇಳಿದಂತೆ ನಾವುಗಳೆಲ್ಲರೂ ಮನೆಗೊಂದು ಮರ ಊರಿಗೊಂದು ವನ ಎನ್ನುವಂತೆ ನಮ್ಮ ನಮ್ಮ ಮನೆಗಳ ಮುಂದೆ ಒಂದೊಂದು ಸಸಿನೆಟ್ಟು ಅವರ ಕನಸನ್ನು ಈಡೇರಿಸೋಣ ತಿಳಿಸಿದರು.
ಇದೇ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರನ್ನು ಶಾರದಾ ಮಹಿಳಾ ಕಲಾ ಮತ್ತು ಪದವಿ ಮಹಾವಿದ್ಯಾಲಯದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾರದಾ ಮಹಿಳಾ ಶಿಕ್ಷಣ ಅದ್ಯಕ್ಷರಾದ ಎನ್ ವಿಜಯಕುಮಾರ,ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ ಬಾದರ್ಲಿ,ಮುಖ್ಯ ಅತಿಥಿಗಳಾಗಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪೂರ,ಮೃತ್ಯುಂಜಯ ಹಿರೇಮಠ IQAC ಸಂಚಾಲಕರು,ದೊಡ್ಡಬಸವ ಹಿರೇಮಠ NSS ಅಧಿಕಾರಿಗಳು,ವನಸಿರಿ ಫೌಂಡೇಶನ್ ಮಸ್ಕಿ ತಾಲೂಕ ಅದ್ಯಕ್ಷ ರಾಜು ಬಳಗಾನೂರ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.