ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

2021-12 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ಈ ಸಂದರ್ಭದಲ್ಲಿ ಚಿಕ್ಕೋಡಿಯ ಜಿಲ್ಲಾ ಸಂಚಾಲಕ ಪ್ರಸಾದ್ ಹಂಚಿನಾಳ ಮಾತನಾಡಿ 2021-12 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ UUCMS ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಇವತ್ತು ಪ್ರತಿಭಟನೆ ಮಾಡಲಾಯಿತು.

ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಿಂದ ಬರುವಹಣವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು. ಅವರ ಬಾರಿ, ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಈ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ: ಬಿಡುಗಡೆ ಆಗಿರುವುದಾಗಿ ನಮೂದಿಸಲಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆತಿರುವುದಿಲ್ಲ. ಈ ಕೂಡಲೇ ಸರಕಾರವು ಈ ವಿಷಯದ ಕುರಿತು ಗಮನವನ್ನು ಹರಿಸಿ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆಗೊಳಿಸಬೇಕಾಗಿ ಹಾಗೂ ವಿದ್ಯಾರ್ಥಿವೇತನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆಯು ಸೂಕ್ತ ತನಿಖೆ ನಡೆಸಯವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಆಗ್ರಹ ಮಾಡುತ್ತಿದೆ ಎಂದು ಹೇಳಿದರು.

NEP ಜಾರಿಯಾದ ನಂತರ, ಎಲ್ಲಾ ವಿಶ್ವವಿದ್ಯಾನಿಲಯಗಳು UUCMS ತಂತ್ರಾಂಶವನ್ನು ಬಳಸಿ, ದಾಖಲಾತಿಯಿಂದ ಫಲಿತಾಂಶದವರೆಗೆ ಎಲ್ಲಾ ರೀತಿಯ ಮಾಹಿತಿಗಳನ್ನು ಇದರ ಮೂಲಕವೇ ನಮೂದಿಸಬೇಕಾಗಿದೆ. ಆದರೆ ಈ ತಂತ್ರಾಂಶದಲ್ಲಿರುವ ಕೆಲವು ಸಮಸ್ಯೆಗಳಿಂದ, ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು, ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದೆ. ವಿಶ್ವವಿದ್ಯಾಲಯಗಳು ಸರಿಯಾದ ರೀತಿಯಲ್ಲಿ ಫಲಿತಾಂಶವನ್ನು ನೀಡದೆ ಇರುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ವಿದ್ಯಾರ್ಥಿ ಸಮೂಹ ಎದುರಿಸುತ್ತಿದ್ದು, ಈ ಕೂಡಲೇ ಅವುಗಳನ್ನು ಬಗೆಹರಿಸುವಂತೆ ವಿದ್ಯಾರ್ಥಿ ಪರಿಷತ್‌ ಆಗ್ರಹಿಸುತ್ತದೆ. ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಮುತ್ತು ಕಾಂಬಳೆ, ತಾಲೂಕು ಸಂಚಾಲಕ ಶಿವಕುಮಾರ್ ಮಾಳಿ, ಉದಯ ನಾವಿ, ಸಾಗರ ನಾವಿ, ವಿಜಯ ನಾಯಿಕ, ಶ್ರೀಶೈಲ ಪಾಟೀಲ, ಉದಯ ನಾಯಿಕ ಹಾಗೂ ಹಲವಾರು ವಿದ್ಯಾರ್ಥಿಗಳೂ ಹಾಜರಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ