ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಶ್ರೀಮತಿ ಅರ್ಚನಾ ಮತ್ತು ಉಪಾಧ್ಯಕ್ಷರಾಗಿ ಕೆಂಪಾರರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದ ಲೋಕೋಪಯೋಗಿ ಇಲಾಖೆಯ ಎಇ ಸತೀಶ್ ಚಂದ್ರ ಅವರು ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರವನ್ನು ಸ್ವೀಕರಿಸಿ ಪರಿಶೀಲಿಸಿದರು ನಂತರ ಅವಿರೋಧವಾಗಿ ಅಧ್ಯಕ್ಷ ಉಪಾಧ್ಯಕ್ಷರನ್ನು ಘೋಷಣೆ ಮಾಡಿದರು.ಈ ಸಂದರ್ಭದಲ್ಲಿ ಪಿಡಿಒ ಕಿರಣ್,ಗ್ರಾಮ ಪಂಚಾಯತಿ ಸದಸ್ಯರುಗಳು ಹಾಗೂ ಮುಖಂಡರುಗಳು ಹಾಜರಿದ್ದರು.
ವರದಿ-ಉಸ್ಮಾನ್ ಖಾನ್
