ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕಿನ ಅಂಬಳಿ ಯ ಆಶ್ರಯ ಕಾಲೋನಿಯ ಮಧ್ಯೆ ಇರುವ ಹದೆಗಟ್ಟಿರುವ ರಸ್ತೆಯಲ್ಲಿ ದಿನಾಲೂ ನೂರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಿದ್ದು ಅದು ಅಲ್ಲದೆ ಬೇವೂರು ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳು ಇಲ್ಲಿ ದಿನಾಲೂ ಸಂಚರಿಸುತ್ತಿದ್ದು
ಅಂಬಳಿ ಗ್ರಾಮದ ಸಾರ್ವಜನಿಕರು ತಮ್ಮ ವ್ಯಾಪಾರ ವಹಿವಾಟುಗಳಿಗೆ ಕೊಟ್ಟೂರಿಗೆ ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ ಪ್ರಸ್ತುತ ಮಳೆಗಾಲದಲ್ಲಿ ಈ ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ.
ಈ ರಸ್ತೆಯಲ್ಲಿ ಇಲ್ಲಿಯವರೆಗೆ ಹತ್ತಾರು ಮೋಟರ್ ಸೈಕಲ್ ವಾಹನಗಳ ಸವಾರರು ಅಪಘಾತಕ್ಕೆ ಒಳಗಾಗಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಈ ರಸ್ತೆಯನ್ನು ಸರಿಪಡಿಸಿ ಗೊಳಿಸಬೇಕೆಂದು ಅಂಬಳಿ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮೊದಲಿನಂತೆಯೇ
ಇದರ ಬಗ್ಗೆ ಅಸಡ್ಡೆ ತೋರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ಮತ್ತು ಕೊಟ್ಟೂರು ತಾಲೂಕು ಜೆಡಿಎಸ್ ಅಧ್ಯಕ್ಷರಾದ ಸೋಮಶೇಖರ್ ಇವರು ಪತ್ರಿಕೆಗೆ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.