ಹನೂರು:ಆಗಸ್ಟ್ 15 ರಂದು ನಡೆಯಲಿರುವ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರತಿವರ್ಷ ನಡೆಯುವಂತೆ ಎಲ್ಲಾ ಇಲಾಖೆ ಅಧಿಕಾರಿಗಳ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ನಡೆದ ಹನೂರು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಆಗಸ್ಟ್ 15ರಂದು ನಡೆಯುವ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪಟ್ಟಣದಲ್ಲಿ ನಡೆಯುವ 77ನೇ ಸ್ವಾತಂತ್ರ್ಯ ದಿನಾಚರಣೆ ಇದೇ ತಿಂಗಳು 15ನೇ ತಾರೀಕು ಅಚ್ಚುಕಟ್ಟಾಗಿ ತಾಲೂಕು ಕೇಂದ್ರ ಸ್ಥಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹಬ್ಬದ ಪೂರ್ವ ತಯಾರಿ ಬಗ್ಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುವ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ನಡೆಯುವ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು ತಪ್ಪದೆ ಹಾಜರಿರಬೇಕು ಕಾರ್ಯಕ್ರಮವನ್ನು ಯಾವುದೇ ಲೋಪದೋಷಗಳಿಲ್ಲದೆ ಅಚ್ಚುಕಟ್ಟಾಗಿ ನಿರ್ವಹಿಸಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಗಳಾದ ತಹಸಿಲ್ದಾರ್ ಗುರುಪ್ರಸಾದ್ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್ .ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ್ ಉಪ ನೊಂದನಾಧಿಕಾರಿ ಉಷಾ ಕೃಷಿ ಇಲಾಖೆ ಅಧಿಕಾರಿ ರಘುವೀರ್ ಅಗ್ನಿಶಾಮಕ ದಳದ ಅಧಿಕಾರಿ ಪ್ರಶಾಂತ್ ನಾಯಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.