ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಣಿಪುರ ಗಲಭೆ ಹಿಂಸಾಚಾರ,ಅತ್ಯಾಚಾರ ಪ್ರಕರಣ ವಿರುದ್ಧ ಪ್ರತಿಭಟನೆ-ಕರವೇ ಸ್ವಾಭಿಮಾನಿ ಸೇನೆ ಧಾರವಾಡ

ಧಾರವಾಡ:ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣ ಹಾಗೂ ಮಹಿಳೆಯರ ಮೇಲಿನ ಮಣಿಪುರ ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಧಾರವಾಡ ಜಿಲ್ಲಾಧ್ಯಕ್ಷರಾದ ಪಂಡಿತರಾಜ್ ಎನ್ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಕಾರ್ಯಧ್ಯಕ್ಷರಾದ ರಾಮು ತಳವಾರ,ಧಾರವಾಡ ಜಿಲ್ಲಾ ಮುಖಂಡರಾದ ಸಂಗೊಳ್ಳಿ, ಸೋಮಣ್ಣ,ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾದ ರಾಜು ಯರಗಣಿ,ಧಾರವಾಡ ಜಿಲ್ಲಾ ಸಮಿತಿಯ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಚಮನಗೌಡ್ರ,ಧಾರವಾಡ ಜಿಲ್ಲಾ ಮುಖಂಡರಾದ ಶ್ರೀಮತಿ ಸಾವಿತ್ರಿ ಮಳಗಿ,ಹಾವೇರಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾದ ಮಾರುತಿ ತಾಳೆ,
ಶ್ರೀಮತಿ ಗೀತಾ ಅರಳಲೇ ಮಠ,ಕುಂದಗೋಳ ತಾಲೂಕ ಮಹಿಳಾ ಸಮಿತಿಯ ತಾಲೂಕ ಅಧ್ಯಕ್ಷರಾದ ಶ್ರೀಮತಿ ಫರೀದಾ ಎಮ್ ನದಾಫ್ ಸೇರಿದಂತೆ ಅನೇಕ ಕರವೇ ಕಾರ್ಯಕರ್ತರು ಹಾಗೂ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!