ಸಿಂಧನೂರಿನ ಅನಿಕೇತನ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಇಂದು ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ತಿಮ್ಮಣ್ಣ ರಾಮತ್ನಾಳ ಮಾತನಾಡಿ ಅಮರೇಗೌಡ ಮಲ್ಲಾಪೂರ ಅವರು ತಮ್ಮ ಜೀವನದ ಏಳುಬೀಳುಗಳ ನಡುವೆ ಜೀವನದುದ್ದಕ್ಕೂ ಪರಿಸರ ಸಂರಕ್ಷಣೆಗಾಗಿ ಹಲವಾರು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪರಿಸರ ಸೇವೆಯಲ್ಲಿ ತೊಡಗಿದ್ದಾರೆ ಅವರ ಸೇವೆ ಅಗಾಧವಾದದ್ದು ಪರಿಸರ ಸೇವೆಗೆ ರಾಜ್ಯ ಪರಿಸರ ಪ್ರಶಸ್ತಿ ದೊರಕಿರುವುದು ಹೆಮ್ಮೆಯ ವಿಷಯ,ಪರಿಸರದ ಸಂರಕ್ಷಣೆಗಾಗಿ ಕಲ್ಯಾಣ ಕರ್ನಾಟಕದಲ್ಲಿ ಹಗಲಿರುಳೆನ್ನದೆ ಪರಿಸರ ಸೇವೆಯಲ್ಲಿ ತೊಡಗಿರುವವರು ಸಿಂಧನೂರಿನ ವನಸಿರಿ ಅಮರೇಗೌಡ ಮಲ್ಲಾಪೂರ ವನಸಿರಿ ಫೌಂಡೇಶನ್ ತಂಡದ ಕಾರ್ಯವನ್ನು ವೀಕ್ಷಣೆ ಮಾಡಲು ಇಲ್ಲಿಗೆ ಬಂದಿದ್ದೇವೆ ಎಲ್ಲಾ ವಿದ್ಯಾರ್ಥಿಗಳು ವನಸಿರಿ ತಂಡದ ಪರಿಸರ ಸಂರಕ್ಷಣೆಯ ಕಾರ್ಯಗಳನ್ನು ನೋಡಿ ಕಲಿಯಬೇಕು ಮುಂದಿನ ಪೀಳಿಗೆಗೆ ಪರಿಸರವನ್ನು ನಾವುಗಳೆಲ್ಲರೂ ಸಂರಕ್ಷಣೆ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ವಿಶೇಷತೆ:ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ.ಅಮರೇಗೌಡ ಮಲ್ಲಾಪೂರ ಅವರ ಕಾರ್ಯಕ್ಕೆ ಕೈ ಜೋಡಿಸಲು ಪರಿಸರಕ್ಕೆ ಕಾಲೇಜಿನ ಕೊಡುಗೆ ಕೂಡ ಅಲ್ಪಸೇವೆ ಇರಲೆಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ರಸ್ತೆಯ ಅಕ್ಕಪಕ್ಕದಲ್ಲಿ ಸುಮಾರು 30 ಸಸಿಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ, ಕಾಲೇಜಿನ ಪ್ರಾಚಾರ್ಯರಾದ ತಿಮ್ಮಣ್ಣ ರಾಮತ್ನಾಳ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿಗಳಾದ ಜಗದೀಶ ಬೆನ್ನೂರು,ಅಮರಯ್ಯ ಪತ್ರಿಮಠ ಹಾಗೂ ಅನಿಕೇತನ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.