ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯನವರಿಂದ ಇಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಉದ್ಘಾಟನೆ,ಆರ್.ಟಿ.ಓ. ಕಚೇರಿ, ಕೆಎಸ್‌ಆರ್‌ಟಿಸಿ ಡಿಪೊ,ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್ ,(ಕೊಕಟನೂರ),ಸತ್ತಿ ಮತ್ತುಇತರ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೆ ಅಡಿಗಲ್ಲು,ಚಿಕ್ಕೂಡ ಮತ್ತು ಇತರ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೆ ಅಡಿಗಲ್ಲು, ಅಥಣಿಯಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಮೂರ್ತಿ ಅನಾವರಣ,ಶ್ರೀ ಸಿದ್ದರಾಮೇಶ್ವರ ನೀರಾವರಿ ಯೋಜನೆ (ವಡ್ಡರ ಸಮಾಜ) ಉದ್ಘಾಟನೆ,ತೆಲಸಂಗದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಉದ್ಘಾಟನೆ, ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ-ಅಥಣಿ ನಗರ ಕಟ್ಟಡ ಉದ್ಘಾಟನೆ,ಸಹಕಾರಿ ಪಶು ಗೋ ಶಾಲೆಯ ಉದ್ಘಾಟನೆ ಸಮಾರಂಭವು ಮತಕ್ಷೇತ್ರದ ಅಪಾರ ಜನಸಾಗರದ ಮಧ್ಯೆ ನೆರವೇರಿತು.
ಮಾಜಿ ಉಪಮುಖ್ಯಮಂತ್ರಿಗಳು,ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್,ಲೊಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮೀ ಆರ್.ಹೆಬ್ಬಾಳಕರ್ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾರೆಡ್ಡಿ,ಪಶು ಸಂಗೋಪನಾ ಹಾಗೂ ರೇಷ್ಮೆ ಸಚಿವರಾದ ಸನ್ಮಾನ್ಯ ಶ್ರೀ ಕೆ ವೆಂಕಟೇಶ,ಮಾನ್ಯ ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜ್, ಶಾಸಕರಾದ ಭರಮಗೌಡ ಕಾಗೆ,ವಿಶ್ವಾಸ ವೈದ್ಯ,ಜೆ.ಟಿ. ಪಾಟೀಲ,ಮಹೇಂದ್ರ ತಮ್ಮಣ್ಣವರ,ಬಾಬಾಸಾಹೇಬ್ ಪಾಟೀಲ,ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ,ಚನ್ನರಾಜ್ ಹಟ್ಟಿಹೊಳಿ,ಕೊಕಟನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಪೂಜಾರಿ,ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ವಾಗತಿಸಿದರು ಬೀದರ್‌ನ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ವಂದಿಸಿದರು.ಕೊಕಟನೂರ ಗ್ರಾಮ ಸೇರಿದಂತೆ ಅಥಣಿ ಮತಕ್ಷೇತ್ರದ ಅಪಾರ ಜನಸ್ತೋಮ ಸಮಾರಂಭದಲ್ಲಿ ಪಾಲ್ಗೊಂಡಿತ್ತು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.