
ಬಿಜೆಪಿಯಿಂದ ಸಂವಿಧಾನ ಬದಲಾವಣೆ ಮಾತೆ ಇಲ್ಲ , ಸಂವಿಧಾನ ಜಾಗೃತಿಗಾಗಿ ಭೀಮ ನಡೆ ಕಾರ್ಯಕ್ರಮ : ಛಲವಾದಿ ನಾರಾಯಣಸ್ವಾಮಿ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಡೆದ ಸಂವಿಧಾನ ಸಮರ್ಪಣಾ ದಿನ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ಛಲವಾದಿ ನಾರಾಯಣ ಸ್ವಾಮಿ ಉದ್ಘಾಟಿಸಿದರು.








